HomeKarnatakaರೈತರೇ ಗಮನಿಸಿ : ಈ ಕೆಲಸ ಮಾಡದಿದ್ದರೆ ನಿಮ್ಮ ಖಾತೆಗೆ ಬರಲ್ಲ ʻಪಿಎಂ ಕಿಸಾನ್ʼ...

ರೈತರೇ ಗಮನಿಸಿ : ಈ ಕೆಲಸ ಮಾಡದಿದ್ದರೆ ನಿಮ್ಮ ಖಾತೆಗೆ ಬರಲ್ಲ ʻಪಿಎಂ ಕಿಸಾನ್ʼ ಹಣ!

ಬೆಂಗಳೂರು : ಪಿಎಂ ಕಿಸಾನ್‌  ಯೋಜನೆ ಫಲಾನುಭವಿಗಳಿಗೆ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ರೈತರು ತಪ್ಪದೇ ಇ-ಕೆವೈಸಿ ಮಾಡುವುದು ಕಡ್ಡಾಯವಾಗಿದೆ.

ಅರ್ಹ ರೈತರ ನೋಂದಣಿಯೊಂದಿಗೆ ಈಗಾಗಲೇ ನೋಂದಣಿಯಾಗಿರುವ ರೈತರ ಬಾಕಿಯಿರುವ ಇ-ಕೆವೈಸಿ ಮಾಡಿಸಲು ಮತ್ತು ರೈತರ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿಸಿಕೊಳ್ಳುವ ಮೂಲಕ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಕೋರಲಾಗಿದೆ.

ಭಾರತ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೊಳಿಸಿದ್ದು, ಯೋಜನೆಯ ಮಾರ್ಗಸೂಚಿಯಂತೆ ಭೂ ಒಡೆತನ ಹೊಂದಿರುವ ಪ್ರತಿ ಅರ್ಹ ರೈತರ ಕುಟುಂಬಕ್ಕೆ ಕೇಂದ್ರ ಸರ್ಕಾರದಿಂದ ಒಂದು ವರ್ಷಕ್ಕೆ ರೂ. 6000/- ಪ್ರತಿ 4 ತಿಂಗಳಿಗೊಮ್ಮೆ 3 ಕಂತುಗಳಲ್ಲಿ ನೀಡಲಾಗುತ್ತಿದ್ದು, ಸಾಗುವಳಿ ಭೂಮಿ ಹೊಂದಿರುವ ಎಲ್ಲಾ ಅರ್ಹ ರೈತರನ್ನು ಈ ಯೋಜನೆಯ ವ್ಯಾಪ್ತಿಗೆ ತರಲು ಫೆ. 12 ರಿಂದ 21 ರವರೆಗೆ 10 ದಿನಗಳ ರಾಷ್ಟ್ರವ್ಯಾಪಿ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರೈತರು ತಮ್ಮ ಆಧಾರ್ ಕಾರ್ಡ್ ಹಾಗೂ ಮೊಬೈಲ್‍ನೊಂದಿಗೆ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ ಅಥವಾ ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅಥವಾ ಕೇಂದ್ರ ಸರ್ಕಾರವು ಬಿಡುಗಡೆಗೊಳಿಸಿರುವ ಪಿಎಂಕಿಸಾನ್ ಇ-ಕೆವೈಸಿ ಫೇಸ್ ರೆಗ್ನನೇಷನ್ ಆಪ್ ಮೂಲಕ ಇ-ಕೆವೈಸಿ ಮಾಡಿಸುವಂತೆ ಸೂಚನೆ ನೀಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular