ಬೆಂಗಳೂರು : ವಸತಿ ಶಿಕ್ಷಣ ಸಂಸ್ಥೆಗಳಿಂದ ನಡೆಸಲಾಗುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸೇರಿದಂತೆ ವಿವಿಧ ವಸತಿ ಶಾಲೆಗಳಲ್ಲಿ 2024-25 ನೇ ಸಾಲಿಗೆ 6 ನೇ ತರಗತಿ ಪ್ರವೇಶಕ್ಕೆ ಫೆಬ್ರವರಿ 18 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ.
6 ನೇ ತರಗತಿ ಪ್ರವೇಶ ಪಡೆಯಲು ಪ್ರಸಕ್ತ ಸಾಲಿನಲ್ಲಿ 5 ನೇ ತರಗತಿ ಓದುತ್ತಿರುವ 4495 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದು ಪ್ರವೇಶ ಪರೀಕ್ಷೆ ಬರೆಯಲಿದ್ದಾರೆ.
ಪ್ರವೇಶ ಪರೀಕ್ಷೆಯನ್ನು ಇದೇ ಮೊದಲ ಭಾರಿಗೆ ಪರೀಕ್ಷೆ ಬರೆಯುತ್ತಿದ್ದು ಆಸನದ ವ್ಯವಸ್ಥೆ, ಕುಡಿಯುವ ನೀರು, ಗಾಳಿ, ಬೆಳಕು ಇರುವಂತೆ ಮೂಲಭೂತ ಸೌಕರ್ಯ ಕಲ್ಪಿಸಬೇಕು. ಫೆಬ್ರವರಿ 18 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1 ಗಂಟೆವರೆಗೆ 100 ಅಂಕಗಳಿಗೆ ಪರೀಕ್ಷೆ ನಡೆಯಲಿದೆ.
ಕೋಚಿಂಗ್ ಸೆಂಟರ್ ಆಯ್ಕೆಗೆ ಪರೀಕ್ಷೆ; ಸರ್ಕಾರದಿಂದ ಐಎಎಸ್, ಕೆ.ಎ.ಎಸ್, ಬ್ಯಾಂಕಿಂಗ್, ಸಿಬ್ಬಂದಿ ನೇಮಕಾತಿ ಆಯೋಗ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ದತೆ ಮಾಡಿಕೊಳ್ಳಲು ಪ್ರತಿಷ್ಟಿತ ಕೋಚಿಂಗ್ ಸೆಂಟರ್‍ಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಫೆಬ್ರವರಿ 18 ರಂದು ಪ್ರವೇಶ ಪರೀಕ್ಷೆ ನಡೆಯಲಿದೆ.