ಬೆಂಗಳೂರು : ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಷ್ಟ್ರೀಯ ಕೃಷಿ ವಿಕಾಸ್ ಯೋಜನೆಯಡಿ ಕರ್ನಾಟಕ ಸರ್ಕಾರಕ್ಕೆ ಮೂರನೇ ಕಂತಿನ 235. 14 ಕೋಟಿ ರೂ.ಗಳನ್ನು ಬಿಡುಗಡೆಮಾಡಲಾಗಿದೆ.
ಈ ಕುರಿತು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮಾಹಿತಿ ನೀಡಿದ್ದು, ಕರ್ನಾಟಕಕ್ಕೆ ಕೃಷಿ ವಿಕಾಸ ಯೋಜನೆಯಡಿ 235. 14 ರೂ.ಬಿಡುಗಡೆಯಾಗಿದ್ದು, ಈ ಹಣವನ್ನು ಕೃಷಿ ವಲಯದ ಮೂಲಸೌಕರ್ಯ ಅಭಿವೃದ್ಧಿಗೆ, ಗೋದಾಮುಗಳ ನಿರ್ಮಾಣ, ಜಲ ಸಂಗ್ರಹಾಗಾರಗಳ ನಿರ್ಮಾಣ, ಟ್ರ್ಯಾಕ್ಟರ್, ಪವರ್ ಟಿಲ್ಲರ್, ಡ್ರೋನ್ ಗಳ ಖರೀದಿಗೆ, ಸಮಗ್ರ ಕೃಷಿ ಉತ್ತೇಜನ, ಮಣ್ಣಿನ ಫಲವತ್ತತೆ ಪರೀಕ್ಷೆಗೆ ಬಳಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ.