HomeKarnatakaವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಮೇ 31ರವರೆಗೆ ವಿಸ್ತರಣೆ: ಸಾರಿಗೆ ಇಲಾಖೆ ಅಧಿಕೃತ...

ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಮೇ 31ರವರೆಗೆ ವಿಸ್ತರಣೆ: ಸಾರಿಗೆ ಇಲಾಖೆ ಅಧಿಕೃತ ಆದೇಶ

ಬೆಂಗಳೂರು: ಇಂದಿನಿಂದ ಮೇ 31 ರವರೆಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಅವಕಾಶ ನೀಡಲಾಗಿದೆ. ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ವಿ.ಎಸ್. ಪುಷ್ಪಾ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.

ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಗಡುವು ವಿಸ್ತರಣೆ ಬಗ್ಗೆ ಸದನದಲ್ಲಿ ಮಾಹಿತಿ ನೀಡಿದ್ದರು. ಗಡುವು ವಿಸ್ತರಣೆ ಮಾಡಿ ರಾಜ್ಯ ಸಾರಿಗೆ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.

ಫೆ. 17ರ ವರೆಗೆ ಹೆಚ್.ಎಸ್.ಆರ್.ಪಿ. ನಂಬರ್ ಪ್ಲೇಟ್ ಅಳವಡಿಕೆಗೆ ಅವಕಾಶ ನೀಡಲಾಗಿತ್ತು. ಇನ್ನೂ ಭಾರಿ ಸಂಖ್ಯೆಯ ವಾಹನಗಳು ನಂಬರ್ ಪ್ಲೇಟ್ ಅಳವಡಿಸಿಕೊಳ್ಳದ ಹಿನ್ನಲೆಯಲ್ಲಿ ಗಡುವು ವಿಸ್ತರಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular