HomeKarnatakaBIG NEWS: ಸುಳ್ಳು ದೂರು ಪ್ರಕರಣ; ಮಾಜಿ ಬಿಗ್ ಬಾಸ್ ಸ್ಪರ್ಧಿ ಅದಂ ಪಾಷಾಗೆ ಸಂಕಷ್ಟ

BIG NEWS: ಸುಳ್ಳು ದೂರು ಪ್ರಕರಣ; ಮಾಜಿ ಬಿಗ್ ಬಾಸ್ ಸ್ಪರ್ಧಿ ಅದಂ ಪಾಷಾಗೆ ಸಂಕಷ್ಟ


ಬೆಂಗಳೂರು: ಲಾರಿ ಚಾಲಕನೊಬ್ಬ ತನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾನೆ ಎಂದು ಆರೋಪಿಸಿ ಮಾಜಿ ಬಿಗ್ ಬಾಸ್ ಸ್ಪರ್ಧಿ ಆದಂ ಪಾಷಾ ಎಲೆಕ್ಟ್ರಾನಿಕ್ ಸಿಟಿ ಠಾಣೆಯಲ್ಲಿ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರಿಗೆ ಆದಂ ಪಾಷಾ ನೀಡಿದ್ದು ಸುಳ್ಳು ದೂರು ಎಂಬುದು ಬಯಲಾಗಿದೆ. ಪೊಲೀಸರು ಸಿಸಿಟಿವಿ ಕ್ಯಾಮರಾ ಪರಿಶೀಲನೆ ನಡೆಸಿದಾಗ ಆದಂ ಪಾಷಾ ಸುಳ್ಳು ಪ್ರಕರಣ ದಾಖಲಿದ್ದಾಗಿ ಸ್ಪಷ್ಟವಾಗಿದೆ.

ಎಲೆಕ್ಟ್ರಾನಿಕ್ ಸಿಟಿ ಠಾಣಾ ವ್ಯಾಪ್ತಿಯಲ್ಲಿ ವ್ಯಾಲಂಕೇಣಿ ಬ್ರಿಡ್ಜ್ ಬಳಿ ವಾಟರ್ ಟ್ಯಾಂಕ್ ಲಾರಿ ವೇಗವಾಗಿ ಬರುತ್ತಿದ್ದುದನ್ನು ಪ್ರಶ್ನಿಸಿದ್ದಕ್ಕೆ ಲಾರಿ ಚಾಲಕ ತನಗೆ ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿದ್ದಾಗಿ ಆದಂ ಪಾಷಾ ಆರೋಪಿಸಿ ದೂರು ನೀಡಿದ್ದರು. ಪ್ರಕರಣ ದಾಖಲಿಸುವ ವೇಳೆ ಆದಂ ಪಾಷಾ ರಾಂಗ್ ನಂಬರ್ ಕೊಟ್ಟಿದ್ದಾರೆ. ತನಿಖೆ ಚುರುಕುಗೊಳಿಸಿದ ಪೊಲೀಸರು ಸಿಸಿಟಿವಿ ಕ್ಯಾಮರಾ ಪರಿಶೀಲಿಸಿದಾಗ ತನ್ನ ಬಟ್ಟೆಗಳನ್ನು ತಾನೇ ಹರಿದುಕೊಂಡು ಬಂದು ದೂರು ನೀಡಿರುವುದು ಗೊತ್ತಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿಸಿಟಿವಿಯ ಒರಿಜಿನಾಲಿಟಿ ರಿಪೋರ್ಟ್ ಗೆ ಪೊಲೀಸರು ಕಳುಹಿಸಿದ್ದು, ಸುಳ್ಳು ದೂರು ನೀಡಿದ ಹಿನ್ನೆಲೆಯಲ್ಲಿ ಆದಂ ಪಾಷಾ ವಿರುದ್ಧ ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular