HomeKarnatakaBREAKING NEWS: ರಾಜಧಾನಿ ಬೆಂಗಳೂರಿನಲ್ಲಿ ಬಾಲ್ಯ ವಿವಾಹ: 8ನೇ ತರಗತಿ ವಿದ್ಯಾರ್ಥಿನಿಗೆ ಯುವಕನೊಂದಿಗೆ ವಿವಾಹ; FIR...

BREAKING NEWS: ರಾಜಧಾನಿ ಬೆಂಗಳೂರಿನಲ್ಲಿ ಬಾಲ್ಯ ವಿವಾಹ: 8ನೇ ತರಗತಿ ವಿದ್ಯಾರ್ಥಿನಿಗೆ ಯುವಕನೊಂದಿಗೆ ವಿವಾಹ; FIR ದಾಖಲು

ಬೆಂಗಳೂರು: ರಾಜ್ಯದ ಯಾವುದೋ ಕುಗ್ರಾಮಗಳಲ್ಲಿ ಇಂದಿಗೂ ಬಾಲ್ಯ ವಿವಾಹ ಪದ್ಧತಿ ಜೀವಂತವಾಗಿರುವುದನ್ನು ಕೇಳಿದ್ದೆವು. ಆದರೀಗ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೇ ಬಾಲ್ಯ ವಿವಾಹ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರಿನ ಸರ್ಜಾಪುರದಲ್ಲಿ 14 ವರ್ಷದ ಬಾಲಕಿಗೆ ಆಕೆಯ ದೊಡ್ಡಪ್ಪ-ದೊಡ್ಡಮ್ಮ ಸೇರಿ ವಿವಾಹ ಮಾಡಿದ್ದಾರೆ. ಬಾಲಕಿಯ ತಾಯಿಗೂ ವಿಷಯ ತಿಳಿಸದೇ ವಿವಾಹ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಹಲಸಿನಕಾಯಿಪುರದ 24 ವರ್ಷದ ಯುವಕ ವಿನೋದ್ ಕುಮಾರ್ ಎಂಬಾತನ ಜೊತೆಗೆ 8ನೇ ತರಗತಿ ಓದುತ್ತಿದ್ದ ಬಾಲಕಿಯನ್ನು ಕೊಟ್ಟು ವಿವಾಹ ಮಾಡಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಬಾಲಕಿ ತಾಯಿ ಸರ್ಜಾಪುರ ಠಾಣೆಯಲ್ಲಿ ದೂರು ನೀಡಿದ್ದಾರೆ. ತನಗೂ ಹೇಲದೇ ಬಾಲಕಿಯ ದೊಡ್ಡಪ್ಪ ಹಾಗೂ ದೊಡ್ಡಮ್ಮ 14 ವರ್ಷದ ತನ್ನ ಮಗಳ ಮದುವೆ ಮಾಡಿದ್ದಾರೆ ಎಂದು ದೂರು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಾಯಿ ನೀಡಿದ ದೂರಿನ ಮೇರೆಗೆ ಬಾಲ್ಯ ವಿವಾಹ ಮಾಡಿದವರ ವಿರುದ್ಧ ಹಾಗೂ ಯುವಕನ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular