HomeEntertainmentಫೆಬ್ರವರಿ 22ಕ್ಕೆ 'ಭೀಮ' ಚಿತ್ರದ ಮೇಕಿಂಗ್ ವಿಡಿಯೋ ರಿಲೀಸ್

ಫೆಬ್ರವರಿ 22ಕ್ಕೆ ‘ಭೀಮ’ ಚಿತ್ರದ ಮೇಕಿಂಗ್ ವಿಡಿಯೋ ರಿಲೀಸ್

ದುನಿಯಾ ವಿಜಯ್ ನಿರ್ದೇಶಿಸಿ ನಾಯಕನಾಗಿ ಅಭಿನಯಿಸಿರುವ ‘ಭೀಮ’ ಚಿತ್ರ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಒಂದರ ಮೇಲೊಂದು ಗುಡ್ ನ್ಯೂಸ್ ನೀಡುತ್ತಲೇ ಇದೆ.

ಫೆಬ್ರವರಿ 22ರಂದು ಮೇಕಿಂಗ್ ವಿಡಿಯೋ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಇಂದು ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದೆ. ದುನಿಯಾ ವಿಜಯ್ ಈ ಚಿತ್ರಕ್ಕಾಗಿ ಸಾಕಷ್ಟು ಪರಿಶ್ರಮಪಟ್ಟಿದ್ದು, ಸಾಹಸ ದೃಶ್ಯಗಳನ್ನು ಈ ವಿಡಿಯೋದಲ್ಲಿ ನೋಡಬಹುದಾಗಿದೆ.

ಕೃಷ್ಣ ಕ್ರಿಯೇಶನ್ಸ್ ಹಾಗೂ ಜಗದೀಶ್ ಫಿಲಂಸ್ ಬ್ಯಾನರ್ ನಲ್ಲಿ ಕೃಷ್ಣ ಸಾರ್ಥಕ್ ಮತ್ತು ಜಗದೀಶ್ ಗೌಡ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು, ದುನಿಯಾ ವಿಜಯ್ ಗೆ ಜೋಡಿಯಾಗಿ ಅಶ್ವಿನಿ ಅಭಿನಯಿಸಿದ್ದಾರೆ. ಬ್ಲ್ಯಾಕ್ ಡ್ರ್ಯಾಗನ್ ಮಂಜು, ಕಲ್ಯಾಣಿ ಹಾಗೂ ಪ್ರಿಯಾ ಉಳಿದ ಪಾತ್ರ ವರ್ಗದಲ್ಲಿದ್ದಾರೆ. ಶಿವ್ ಸೇನಾ ಸಂಕಲನವಿದ್ದು, ಚರಣ್ ರಾಜ್ ಸಂಗೀತ ಸಂಯೋಜನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular