HomeIndiaBIG UPDATE : ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, 10 ಮಂದಿ ಬಲಿ

BIG UPDATE : ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, 10 ಮಂದಿ ಬಲಿ

ವಿರುಧುನಗರ : ಪಟಾಕಿ ಘಟಕದಲ್ಲಿ ಸ್ಫೋಟ ಸಂಭವಿಸಿ 10 ಜನರು ಸಾವನ್ನಪ್ಪಿ ಹಲವಾರು ಜನರು ಗಾಯಗೊಂಡ ಘಟನೆ ತಮಿಳುನಾಡಿನ ವಿರುಧುನಗರ ಜಿಲ್ಲೆಯ ವೆಂಬಕೊಟ್ಟೈ ಬಳಿಯ ರಾಮುತೆವನ್ಪಟ್ಟಿಯಲ್ಲಿ ಶನಿವಾರ ನಡೆದಿದೆ.

ತೀವ್ರ ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಕಾರ್ಮಿಕರನ್ನು ಶಿವಕಾಶಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ವಿಜಯ್ ಒಡೆತನದ ಖಾಸಗಿ ಪಟಾಕಿ ಘಟಕದಲ್ಲಿ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸಲು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.ಸ್ಫೋಟದ ನಂತರ ಸುಮಾರು 3 ಕಟ್ಟಡಗಳು ನೆಲಸಮವಾಗಿವೆ. ಪಟಾಕಿ ಕಾರ್ಖಾನೆ ಸ್ಫೋಟಗೊಂಡ ಸ್ಥಳಕ್ಕೆ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ಮತ್ತು ವೆಂಬಕೊಟ್ಟೈ ಪ್ರದೇಶದ ಅಗ್ನಿಶಾಮಕ ವಾಹನಗಳು ದೌಡಾಯಿಸಿದೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular