HomeKarnatakaBIG NEWS: ಜೆರೋಸಾ ಶಾಲೆ ಕೇಸ್; ಐಎಎಸ್ ಅಧಿಕಾರಿ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದ ಸರ್ಕಾರ

BIG NEWS: ಜೆರೋಸಾ ಶಾಲೆ ಕೇಸ್; ಐಎಎಸ್ ಅಧಿಕಾರಿ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದ ಸರ್ಕಾರ

ಮಂಗಳೂರು: ಮಂಗಳೂರಿನ ಸಂತ ಜೆರೋಸಾ ಶಾಲೆಯ ಶಿಕ್ಷಕಿ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಶಾಲೆಯಲ್ಲಿ ಮಾತನಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತನಿಖೆಗೆ ಐಎ ಎಸ್ ಅಧಿಕಾರಿಯನ್ನು ನೇಮಕ ಮಾಡಿದೆ.

ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ 7ನೇ ತರಗತಿಯ ಮಕ್ಕಳಿಗೆ ಪಾಠ ಮಾಡುವ ವೇಳೆ ಹಿಂದೂ ಧರ್ಮಕ್ಕೆ ಅವಮಾನ ಮಾಡಿದ್ದಾರೆ ಎನ್ನಲಾಗಿದೆ. ಶಿಕ್ಷಕಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳು, ಪೋಷಕರು ಶಾಲೆಯ ಬಳಿ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ರಾಜಕೀಯ ತಿರುವು ಪಡೆದಿತ್ತು. ಒತ್ತಡ ಹೆಚ್ಚುತ್ತಿದ್ದಂತೆ ಶಾಲೆಯಿಂದ ಶಿಕ್ಷಕಿಯನ್ನು ಅಮಾನತು ಮಾಡಲಾಗಿತ್ತು.

ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಬಿಜೆಪಿಯ ಇಬ್ಬರು ಶಾಸಕರ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಸಂತ ಜೆರೋಸಾ ಶಾಲೆ ಪ್ರಕರಣ ವಿಧಾನಮಂಡಲ ಅಧಿವೇಶನದಲ್ಲಿಯೂ ಪ್ರತಿಧ್ವನಿಸಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದರ ಬೆನ್ನಲ್ಲೇ ಸರ್ಕಾರ ಪ್ರಕರಣದ ತನಿಖೆಗೆ ಐಎಎಸ್ ಅಧಿಕಾರಿಯನ್ನು ನೇಮಕ ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದು, ಸಂತ ಜೆರೋಸಾ ಶಾಲೆ ಪ್ರಕರಣವನ್ನು ಐಎಎಸ್ ಅಧಿಕಾರಿ ಡಾ.ಎಸ್.ಆಕಾಶ್ ಅವರ ನೇತೃತ್ವದಲ್ಲಿ ತನಿಖೆ ನಡೆಸಲು ಸೂಚಿಸಲಗೈದೆ. ಸಮಗ್ರ ತನಿಖೆ ನಡೆಸಿ ವರದಿ ನೀಡಲು ಆದೇಶಿಸಲಾಗಿದ್ದು, ಸತ್ಯಾಸತ್ಯತೆ ಶೀಘ್ರ ಹೊರ ಬರಲಿದೆ ಎಂದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular