ಬಾಗಲಕೋಟೆ : ಜಿಲ್ಲೆಯ ಕಲಾದಗಿಯ ರಂಭಾಪುರಿ ಪಂಚಗೃಹ ಗುರುಲಿಂಗೇಶ್ವರ ಮಠದ ಪೀಠಾಧಿಪತಿ ಆಯ್ಕೆ ಭಾರೀ ವಿವಾದಕ್ಕೆ ಕಾರಣವಾಗಿದ್ದು, ಕುಪಿತಗೊಂಡ ಭಕ್ತರು ರಂಭಾಪುರಿ ಶ್ರೀಗಳ ಕಾರಿಗೆ ಚಪ್ಪಲಿ ಎಸೆದಿದ್ದಾರೆ.
ರಂಭಾಪುರಿ ಶ್ರೀಗಳು ಬಾಗಲಕೋಟೆಯಿಂದ ಕಲಾದಗಿ ಮಾರ್ಗವಾಗಿ ಉದಗಟ್ಟಿ ಗ್ರಾಮಕ್ಕೆ ಅಡ್ಡಪಲ್ಲಕ್ಕಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ, ಕಾರನ್ನು ಅಡ್ಡಹಾಕಿ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ರಂಭಾಪುರಿ ಶ್ರೀಗಳ ಕಾರಿಗೆ ಭಕ್ತರೊಬ್ಬರು ಚಪ್ಪಲಿ ಎಸೆದಿದ್ದಾರೆ. ಸ್ಥಳದಲ್ಲಿ ತಳ್ಳಾಟ, ನೂಕಾಟ ನಡೆದು ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದೆ.
ಬಾಗಲಕೋಟೆ ತಾಲೂಕಿನ ಕಲಾದಗಿ ಗ್ರಾಮದಲ್ಲಿರುವ ರಂಭಾಪುರಿ ಜಗದ್ಗುರು ಪೀಠದ ಶಾಖಾ ಮಠವಾದ ಗುರುಲಿಂಗೇಶ್ವರ ಮಠದ ಪೀಠಾಧಿಪತಿಗಳು 2019ರಲ್ಲಿ ಲಿಂಗೈಕ್ಯರಾಗಿದ್ದರು. ನಂತರ ಪೀಠಾಧಿಪತಿಗಳು ಯಾರಾಗಬೇಕು ಎಂಬ ವಿಚಾರದಲ್ಲಿ ವಿವಾದ ಹುಟ್ಟಿಕೊಂಡಿತ್ತು. ಇಬ್ಬರು ಶ್ರೀಗಳ ನಡುವೆ ವಿವಾದದಿಂದ ಗುರುಗಳ ಆಯ್ಕೆ ಆಗಿರಲಿಲ್ಲ. ಈ ವಿವಾದ ಕೋರ್ಟ್ ಮೆಟ್ಟಿಲು ಏರಿತ್ತು, ವಿವಾದ ಕೋರ್ಟ್ ನಲ್ಲಿದ್ದಾಗಲೇ ಗಂಗಾಧರ ಸ್ವಾಮೀಜಿ ಅವರಿಂದ ಮಠದ ದುರಸ್ತಿ ಮಠದ ಹೊಲದ ಉಳುಮೆಗೆ ಭಕ್ತರು ಆಕ್ರೋಶಗೊಂಡಿದ್ದು, ಗಂಗಾಧರ ಸ್ವಾಮೀಜಿ ಅವರನ್ನು ಮಠದೊಳಗೆ ಬಿಡುವುದಿಲ್ಲ ಎಂದು ಭಕ್ತರು ಪಟ್ಟು ಹಿಡಿದಿದ್ದಾರೆ.