ಹಾವೇರಿ: ಹಾವೇರಿಯಲ್ಲಿ ಹೆಸ್ಕಾಂ ನಿರ್ಲಕ್ಷ್ಯಕ್ಕೆ ಯುವಕ ಬಲಿಯಾಗಿದ್ದಾರೆ. ಹಾವೇರಿ ನಗರದ ಮಣಿಗಾರ ಓಣಿಯಲ್ಲಿ ಘಟನೆ ನಡೆದಿದ್ದು, ಲೈನ್ ಮೆನ್ ಸುರೇಶ್(38) ಸ್ಥಳದಲ್ಲೇ ಸಾವು ಕಂಡಿದ್ದಾರೆ. ಮತ್ತೊಬ್ಬ ಸಿಬ್ಬಂದಿ ನಿಂಗಪ್ಪ ಗಾಯಗೊಂಡಿದ್ದಾರೆ.
ಬೋರ್ ವೆಲ್ ಗೆ ತ್ರೀಫೇಸ್ ಲೈನ್ ಅಳವಡಿಸುವಾಗ ಅವಘಡ ಸಂಭವಿಸಿದೆ. ವಿದ್ಯುತ್ ಕಡಿತಗೊಳಿಸಿ ಲೈನ್ ಮೆನ್ ಕಾಮಗಾರಿ ಮಾಡುತ್ತಿದ್ದರು. ಏಕಾಏಕಿ ವಿದ್ಯುತ್ ಕನೆಕ್ಟ್ ಮಾಡಿದ್ದರಿಂದ ವಿದ್ಯುತ್ ಪ್ರವಹಿಸಿ ಲೈನ್ ಮೆನ್ ಸುರೇಶ್ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಸಿಬ್ಬಂದಿ ನಿಂಗಪ್ಪ ಅವರು ಗಾಯಗೊಂಡಿದ್ದು, ಹಾವೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.