ಬೆಂಗಳೂರು: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಹುನಗುಂದ ಕ್ಷೇತ್ರದ ಶಾಸಕ ವಿಜಯಾನಂದ ಕಾಶಪ್ಪನವರ್ ಅವರನ್ನು ನೇಮಕ ಮಾಡಲು ಸರ್ಕಾರ ನಿರ್ಧರಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಕಾಶಪ್ಪನವರ್ ಅವರನ್ನು ನೇಮಕ ಮಾಡಿ ಸಂಪುಟ ದರ್ಜೆ ಸಚಿವರ ಸ್ಥಾನಮಾನ ನೀಡುವಂತೆ ಸೂಚನೆ ನೀಡಿದ್ದಾರೆ. ಈ ಮೊದಲು ಕಾಶಪ್ಪನವರ್ ಅವರಿಗೆ ಕ್ರೀಡಾ ಪ್ರಾಧಿಕಾರಕ್ಕೆ ನೇಮಕ ಮಾಡಲಾಗಿತ್ತು. ಆದರೆ ಅವರು ಬದಲಾವಣೆಗೆ ಮನವಿ ಮಾಡಿದ್ದರು.