HomeKarnatakaಉದ್ಯೋಗಾಕಾಂಕ್ಷಿ'ಗಳಿಗೆ ಗುಡ್ ನ್ಯೂಸ್ : '504 KAS ಹುದ್ದೆ' ಭರ್ತಿಗೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್

ಉದ್ಯೋಗಾಕಾಂಕ್ಷಿ’ಗಳಿಗೆ ಗುಡ್ ನ್ಯೂಸ್ : ‘504 KAS ಹುದ್ದೆ’ ಭರ್ತಿಗೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್

‌

ಬೆಂಗಳೂರು :  ರಾಜ್ಯ ಸರ್ಕಾರದ 16 ಇಲಾಖೆಗಳು ಖಾಲಿ ಇರುವ ಕೆಎಎಸ್‌ ಸೇರಿದಂತೆ ಗೆಜೆಟೆಡ್‌ ಪ್ರೊಬೇಷನರಿ ಅಧಿಕಾರಿಗಳ 656 ಹುದ್ದೆಗಳ ನೇರ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿವೆ. ಆದರೆ, ಈ ಪೈಕಿ 504 ಹುದ್ದೆಗಳನ್ನು ಮಾತ್ರ ಭರ್ತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆ ಸಮ್ಮತಿ ನೀಡಿದೆ.

ಈ ಕುರಿತು ವಿಧಾನಪರಿಷತ್‌ ನಲ್ಲಿ ನಿರಾಣಿ ಹಣಮಂತ್‌ ರುದ್ರಪ್ಪ ಅವರು ಕೇಳಿರುವ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿರುವ ಸಿಎಂ ಸಿದ್ದರಾಮಯ್ಯ,  ರಾಜ್ಯದ ವಿವಿಧ ಇಲಾಖೆಯಲ್ಲಿ ಖಾಲಿ ಇರುವಂತ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅನುಮತಿ ನೀಡಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

16 ಇಲಾಖೆಗಳು ಖಾಲಿ ಇರುವ ಕೆಎಎಸ್‌ ಸೇರಿದಂತೆ 656 ಹುದ್ದೆಗಳ ನೇರ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈ ಪೈಕಿ 504 ಹುದ್ದೆಗಳನ್ನು ಮಾತ್ರ ಭರ್ತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆ ಸಮ್ಮತಿ ನೀಡಿದೆ.

For Latest News Updates, Join Our Whatsapp Community🚩
RELATED ARTICLES

Most Popular