ಸಮುದಾಯ ಆರೋಗ್ಯ ಕೇಂದ್ರ ಅಧಿಕಾರಿಗಳು, ಸಿಬ್ಬಂದಿಗೆ ಗುಡ್ ನ್ಯೂಸ್: ಶೇ.5 ರಷ್ಟು ವೇತನ ಹೆಚ್ಚಳಕ್ಕೆ ಸಮ್ಮತಿ

ಬೆಂಗಳೂರು: ಸಮುದಾಯ ಆರೋಗ್ಯ ಕೇಂದ್ರಗಳ ಅಧಿಕಾರಿಗಳು,. ಸಿಬ್ಬಂದಿ ವೇತನವನ್ನು ಶೇಕಡ 5ರಷ್ಟು ಹೆಚ್ಚಳ ಮಾಡಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಒಪ್ಪಿಗೆ ನೀಡಿದ್ದಾರೆ.

ರಾಜ್ಯ ಸಮುದಾಯ ಆರೋಗ್ಯ ಕೇಂದ್ರಗಳ ಅಧಿಕಾರಿಗಳು, ಸಿಬ್ಬಂದಿ ಮತ್ತು ಸಂಘದ ಪದಾಧಿಕಾರಿಗಳು ಫೆಬ್ರವರಿ 13ರಂದು ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿಯಾಗಿ ವೇತನ ಹೆಚ್ಚಳ, ಪ್ರೋತ್ಸಾಹ ಧನವನ್ನು 8000 ರೂ.ನಿಂದ 15000 ರೂ.ಗೆ ಹೆಚ್ಚಳ ಮಾಡಬೇಕು. ಹುದ್ದೆ ಕಾಯಂಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.

ಇದಕ್ಕೆ ಸಚಿವರು ಸೌಲಭ್ಯಗಳ ಕುರಿತಂತೆ ವರದಿ ಪಡೆಯಲು ರಚಿಸಿದ್ದ ನಾಲ್ಕು ತಂಡಗಳು ಒಡಿಶಾ, ರಾಜಸ್ಥಾನ, ತಮಿಳುನಾಡು, ಮಹಾರಾಷ್ಟ್ರ ರಾಜ್ಯಗಳಿಗೆ ಭೇಟಿ ನೀಡಲಿದ್ದು, ನಂತರ ತಂಡಗಳು ನೀಡುವ ವರದಿ ಆಧರಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read