HomeKarnatakaಸಂವಿಧಾನ ಜಾಗೃತಿ ಸಮಾವೇಶಕ್ಕೆ ವಿದ್ಯಾರ್ಥಿಗಳನ್ನು ಕಳಿಸಲು ಕಾಲೇಜು ಶಿಕ್ಷಣ ಇಲಾಖೆ ಸೂಚನೆ

ಸಂವಿಧಾನ ಜಾಗೃತಿ ಸಮಾವೇಶಕ್ಕೆ ವಿದ್ಯಾರ್ಥಿಗಳನ್ನು ಕಳಿಸಲು ಕಾಲೇಜು ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ಫೆಬ್ರವರಿ 24 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿರುವ ಸಂವಿಧಾನ ಜಾಗೃತಿ ಜಾಥಾ ಹಾಗೂ ಐಕ್ಯತಾ ಸಮಾವೇಶಕ್ಕೆ ವಿದ್ಯಾರ್ಥಿಗಳನ್ನು ಕಳಿಸಿಕೊಡುವಂತೆ ಪದವಿ ಕಾಲೇಜುಗಳಿಗೆ ಕಾಲೇಜು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಸಮಾಜ ಕಲ್ಯಾಣ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಜಂಟಿಯಾಗಿ ಅರಮನೆ ಮೈದಾನದಲ್ಲಿ ಸಮಾವೇಶ ಹಮ್ಮಿಕೊಂಡಿದ್ದು, ವಿದ್ಯಾರ್ಥಿಗಳನ್ನು ಕಳಿಸಿಕೊಡಲು ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಲೇಜುಗಳಲ್ಲಿ ಸಂವಿಧಾನ ಜಾಗೃತಿ ಜಾಥಾ, ಸಮಾವೇಶ ಆಯೋಜಿಸಬೇಕಿದೆ. ಸಾರ್ವಜನಿಕ ಆಡಳಿತ, ರಾಜ್ಯಶಾಸ್ತ್ರ, ಸಮಾಜ ಶಾಸ್ತ್ರ ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲಿ ಸಂವಿಧಾನ ಕುರಿತ ಸಂವಾದ ಏರ್ಪಡಿಸಿ ಸಕ್ರಿಯವಾಗಿ ಭಾಗವಹಿಸಲು ಕ್ರಮ ವಹಿಸಬೇಕಿದೆ.

ಸರ್ಕಾರಿ, ಖಾಸಗಿ ಕಾಲೇಜುಗಳ ಪ್ರಾಂಶುಪಾಲರು ಪರಿಣಿತ ವಿದ್ಯಾರ್ಥಿಗಳನ್ನು ಗುರುತಿಸಿ ಅಂತಹ ವಿದ್ಯಾರ್ಥಿಗಳನ್ನು ಅರಮನೆ ಮೈದಾನದಲ್ಲಿ ನಡೆಯುವ ರಾಜ್ಯಮಟ್ಟದ ಸಂವಿಧಾನ ಸಂವಾದ ಕಾರ್ಯಕ್ರಮಕ್ಕೆ ಕಳುಹಿಸಿಕೊಡಬೇಕು. ಫೆಬ್ರವರಿ 20ರೊಳಗೆ ವಿದ್ಯಾರ್ಥಿಗಳ ಪಟ್ಟಿಯನ್ನು ಕಳುಹಿಸುವಂತೆ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular