ಬೆಂಗಳೂರು : ಬೆಂಗಳೂರಿನಲ್ಲಿ ಬೇಸಿಗೆಗೆ ಮುನ್ನವೇ ದುಪ್ಪಟ್ಟು ಹಣ ವಸೂಲಿಗೆ ಮುಂದಾಗಿದ್ದ ನೀರಿನ ಟ್ಯಾಂಕರ್ ಮಾಲೀಕರಿಗೆ ಬಿಬಿಎಂಪಿ ಬಿಗ್ ಶಾಕ್ ನೀಡಿದೆ.
ಬೆಂಗಳೂರಿನಲ್ಲಿ ಖಾಸಗಿ ಟ್ಯಾಂಕರ್ ಮಾಲೀಕರು ದುಪ್ಪಟ್ಟು ಹಣ ವಸೂಲಿ ಮಾಡುತ್ತಿರುವ ಹಿನ್ನೆಲೆಯಲ್ಲಿ ನೀರು ಪೂರೈಸುವ ಖಾಸಗಿ ಟ್ಯಾಂಕರ್ ಗಳಿಗೆ ಬಿಬಿಎಂಪಿ ದರ ನಿಗಿದಿ ಮಾಡಲು ಮುಂದಾಗಿದೆ.
500-600 ರೂಪಾಯಿ ಇದ್ದ ಟ್ಯಾಂಕರ್ ನೀರು ಈಗ ಗಗನಕ್ಕೆ ಏರಿಕೆಯಾಗಿದೆ. 20 ಸಾವಿರ ಲೀಟರ್ ನೀರಿಗೆ 6,500 ರೂ.ವರೆಗೆ ಹೆಚ್ಚಳ ಮಾಡಲಾಗಿದೆ. 5 ಸಾವಿರ ಲೀಟರ್ ನೀರಿಗೆ 1000 ದಿಂದ 6 ಸಾವಿರ ರೂ.ವರೆಗೆ ಮಾರಾಟ ಮಾಡಲಾಗುತ್ತಿದೆ. ಈ ಸಂಬಂಧ ಸಾರ್ವಜನಿಕರಿಂದ ವ್ಯಾಪಕ ದೂರು ಬಂದ ಹಿನ್ನೆಲೆ ನೀರು ಪೂರೈಸುವ ಖಾಸಗಿ ಟ್ಯಾಂಕರ್ ಮಾಲೀಕರಿಗೆ ದರ ನಿಗದಿಗೆ ಬಿಬಿಎಂಪಿ ಚಿಂತನೆ ನಡೆಸಿದೆ.