![](https://kannadadunia.com/wp-content/uploads/2022/11/Dhananjay_adobespark.jpg)
ಮಂಡ್ಯ : ಲೋಕಸಭೆ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಲ್ಲಿ ನಟ ಡಾಲಿ ಧನಂಜಯ್ ಅವರು ಕಾಂಗ್ರೆಸ್ ನಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಕುರಿತಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಟ ಡಾಲಿ ಧನಂಜಯ್ ಸ್ಪರ್ಧಿಸುವ ಕುರಿತಂತೆ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಚರ್ಚೆಗಳಾಗಿಲ್ಲ , ಆ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಬಿಜೆಪಿ ಸಂಸದರಾಗಿರುವವರು ಪ್ರತಾಪ್ ಸಿಂಹ ಅವರನ್ನು ಕಟ್ಟಿ ಹಾಕಲು ಡಾಲಿ ಧನಂಜಯ್ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಪ್ಲಾನ್ ಮಾಡುತ್ತಿದೆ ಎನ್ನಲಾಗಿತ್ತು. ಇದಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.