ಮಹಾರಾಷ್ಟ್ರದ ಅಮರಾವತಿಯಲ್ಲಿ ಭಾನುವಾರ ಬೆಳಗ್ಗೆ ನಡೆದ ಅಪಘಾತದಲ್ಲಿ ಕ್ರಿಕೆಟ್ ಪಂದ್ಯಕ್ಕೆ ತೆರಳುತ್ತಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ಟ್ರಕ್ ಗೆ ಟೆಂಪೋ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಟೆಂಪೋದಲ್ಲಿ ಅಮರಾವತಿ ನಗರದ ಕ್ರಿಕೆಟ್ ತಂಡದ 21 ಸದಸ್ಯರಿದ್ದರು ಮತ್ತು ನಂದಗಾಂವ್ ಖಂಡೇಶ್ವರ ತಾಲೂಕಿನ ಶಿಂಗ್ಣಾಪುರ ಫಾಟಾದಲ್ಲಿ ಬೆಳಗ್ಗೆ 7:30 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ವಿಶಾಲ್ ಆನಂದ್ ತಿಳಿಸಿದ್ದಾರೆ.
ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಟ್ರಕ್ ಚಾಲಕನನ್ನು ಬಂಧಿಸಲಾಗಿದೆ. ಟೆಂಪೋ ಕ್ರಿಕೆಟ್ ಪಂದ್ಯಕ್ಕಾಗಿ ಯವತ್ಮಾಲ್‌ಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ.