ಬೆಂಗಳೂರು: ಬೇಸಿಗೆ ಆರಂಭಕ್ಕೂ ಮೊದಲೇ ರಾಜಧಾನಿ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಆರಂಭವಾಗಿದೆ. ಶೀಘ್ರದಲ್ಲಿಯೇ ನೀರಿನ ಸಮಸೆ ಪರಿಹರಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನ ಆರ್.ಆರ್.ನಗರದಲ್ಲಿ ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ ಧ್ಯೇಯ ವಾಕ್ಯದಡಿ ಜನಸ್ಪಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ, ಮೇ ತಿಂಗಳ ಒಳಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುತ್ತೇವೆ. 6 ಟಿಎಂಸಿ ಕಾವೇರಿ ನೀರು ಬೆಂಗಳೂರಿಗೆ ಮೀಸಲಿಟ್ಟಿದ್ದೇವೆ ಎಂದರು.
ನಮ್ಮ ನೀರು ನಮ್ಮ ಹಕ್ಕು ಎಂಬ ಹೋರಾಟ ಮಾಡಿದ್ದು ಯಾರಿಗಾಗಿ? ಮೇಕೆದಾಟು ಹೋರಾಟ ಮಾಡಿದ್ದು ಬೆಂಗಳೂರಿನವರಿಗಾಗಿ. ಸಧ್ಯದಲ್ಲೇ ಬೆಂಗಳೂರು ಬಜೆಟ್ ಬರುತ್ತಿದೆ. ನೀರಿನ ಸಮಸ್ಯೆ ಬಗೆಹರಿಸಲಿದ್ದೇವೆ ಎಂದು ಹೇಳಿದರು.
ಟ್ರ್ಯಾಫಿಕ್ ಸಮಸ್ಯೆ ನಿವಾರಣೆ ನಿಟ್ಟಿನಲ್ಲಿಯೂ ಕ್ರಮ ಕೈಗೊಳ್ಳುತ್ತೇವೆ. ಬ್ರ್ಯಾಂಡ್ ಬೆಂಗಳೂರು ಮಾಡೋಕೆ ಹೊರಟಿದ್ದೇವೆ ಬೆಂಗಳೂರು ಸಾಕಷ್ಟು ಬದಲಾವಣೆಗಳಿಗೆ ಸಾಕ್ಷಿಯಾಗಲಿವೆ ಎಂದು ತಿಳಿಸಿದರು.