alex Certify ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರಿಗೆ ಸಿಹಿ ಸುದ್ದಿ: ಕನಿಷ್ಠ ವೇತನ, ತುಟ್ಟಿ ಭತ್ಯೆ ಪಾವತಿಗೆ ಸರ್ಕಾರದ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರಿಗೆ ಸಿಹಿ ಸುದ್ದಿ: ಕನಿಷ್ಠ ವೇತನ, ತುಟ್ಟಿ ಭತ್ಯೆ ಪಾವತಿಗೆ ಸರ್ಕಾರದ ಆದೇಶ

ಬೆಂಗಳೂರು: ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರಿಗೆ ಮಾಸಿಕ ಕನಿಷ್ಠ ವೇತನ, ವ್ಯತ್ಯಾಸವಾಗುವ ತುಟ್ಟಿಭತ್ಯೆ ಪಾವತಿಸಲು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರಿಗೆ 16,382.52 ರೂ. ಮಾಸಿಕ ಕನಿಷ್ಠ ವೇತನ ಜೊತೆಗೆ ಕಾರ್ಮಿಕ ಇಲಾಖೆಯಲ್ಲಿ ಕಾಲಕಾಲಕ್ಕೆ ನಿಗದಿಪಡಿಸುವ ವ್ಯತ್ಯಯ ತುಟ್ಟಿ ಭತ್ಯೆಯನ್ನು ಪಾವತಿಸಲು ತಿಳಿಸಲಾಗಿದೆ.

ಗ್ರಂಥಾಲಯ ಉಪಕರವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಉಳಿಸಿಕೊಂಡು ಗ್ರಂಥಾಲಯ ಮೇಲ್ವಿಚಾರಕರ ವೇತನ ಹೆಚ್ಚಳದಿಂದಾಗುವ ಮೊತ್ತವನ್ನು ಉಪಕರದಲ್ಲಿ ಭರಿಸಲು ಆದೇಶಿಸಲಾಗಿದೆ. ದಿನಾಂಕ 04:09:2023ರಿಂದ ಜಾರಿಗೆ ಬರುವಂತೆ ಮಾಸಿಕ ಕನಿಷ್ಠ ವೇತನ 16,382 ರೂ., ವಾರ್ಷಿಕವಾಗಿ ವ್ಯತ್ಯಾಸವಾಗುವ ತುಟ್ಟಿಭತ್ಯೆ(VDA) 1542 ರೂ. ಸೇರಿ ಒಟ್ಟು 17,924 ರೂ. ಪಾವತಿಸಲು ಆದೇಶಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...