HomeKarnatakaBIG NEWS : ರಾಜ್ಯ ಸರ್ಕಾರದ ಮಹತ್ವದ ‘ಆಶಾಕಿರಣ’ ಯೋಜನೆಗೆ ಸಿಎಂ ಚಾಲನೆ ; 2.45...

BIG NEWS : ರಾಜ್ಯ ಸರ್ಕಾರದ ಮಹತ್ವದ ‘ಆಶಾಕಿರಣ’ ಯೋಜನೆಗೆ ಸಿಎಂ ಚಾಲನೆ ; 2.45 ಲಕ್ಷ ಜನರಿಗೆ ಉಚಿತ ಕನ್ನಡಕ.!

ಬೆಂಗಳೂರು : ಉಚಿತ ಕಣ್ಣಿನ ಚಿಕಿತ್ಸೆ ನೀಡುವ ರಾಜ್ಯ ಸರ್ಕಾರದ ಮಹತ್ವದ ಆಶಾಕಿರಣ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.

ಹಾವೇರಿ ನಗರದ ಕೊಳ್ಳಿ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ನಡೆದಿದ್ದು, ಆಶಾಕಿರಣ ಯೋಜನೆಯಡಿ ಸಿದ್ದರಾಮಯ್ಯ ಅವರು ನೇತ್ರ ಸಮಸ್ಯೆವುಳ್ಳ ಮಕ್ಕಳಿಗೆ ಕನ್ನಡಕ ವಿತರಿಸಿದರು.

ಮೊದಲ ಹಂತದಲ್ಲಿ ನಾಲ್ಕು ಜಿಲ್ಲೆಗಳ 2.45 ಲಕ್ಷ ಮಂದಿಗೆ ಕನ್ನಡಕ ವಿತರಿಸುವ ಕಾರ್ಯಕ್ಕೆ ಹಸಿರುನಿಶಾನೆ ತೋರಿದರು.ಈ ಯೋಜನೆಯಲ್ಲಿ ಮೊದಲ ಹಂತದಲ್ಲಿ  ಹಾವೇರಿ, ಕಲಬುರಗಿ, ಚಿಕ್ಕಬಳ್ಳಾಪುರ ಹಾಗೂ ಚಾಮರಾಜನಗರ ಜಿಲ್ಲೆಗಳ ಜನ ರಿಗೆ ಕನ್ನಡಕ ವಿತರಣೆಗೆ ಚಾಲನೆ ಸಿಕ್ಕಿದೆ. 2ನೇ ಹಂತದಲ್ಲಿ ಚಿತ್ರದುರ್ಗ, ಮಂಡ್ಯ, ರಾಯಚೂರು, ಉತ್ತರಕನ್ನಡ ಜಿಲ್ಲೆಗಳಲ್ಲಿ ಹಾವೇರಿಯಲ್ಲಿ ಪುಟ್ಟ ಮಗುವಿಗೆ ಉಚಿತ ಕನ್ನಡಕವನ್ನು ತೊಡಿಸುವ ಮೂಲಕ ‘ಆಶಾಕಿರಣ-ನಿಮ್ಮ ಮನೆ ಬಾಗಿಲಿಗೆ ಕಣ್ಣಿನ ಆರೈಕೆ’ ಯೋಜನೆಗೆ ಭಾನುವಾರ  ಸಿದ್ದರಾಮಯ್ಯ ಚಾಲನೆ ನೀಡಿದರು. ರಾಜ್ಯ ಸರ್ಕಾರದಿಂದ ಮನೆ ಮನೆಗೆ ತೆರಳಿ ಜನರ ಕಣ್ಣಿನತಪಾಸಣೆ ನಡೆಸಿ ಕಣ್ಣಿನ ಪೊರೆಯ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಶಸ್ತ್ರ ಚಿಕಿತ್ಸೆ ಹಾಗೂ ಉಚಿತ ಕನ್ನಡಕ ವಿತರಣೆ ಮಾಡಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಶಾ ಕಾರ್ಯ ಕರ್ತೆಯರು ಹಾಗೂ ಆರೋಗ್ಯ ಸಿಬ್ಬಂದಿ ಮನೆಗೆ ಮನೆಗೆ ತೆರಳಿ ತಪಾಸಣೆ ನಡೆಸಲಿದ್ದಾರೆ. ಹಾವೇರಿ, ಕಲಬುರಗಿ, ಚಾಮರಾಜನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಒಟ್ಟು 56,59, 036 ಜನರನ್ನು ತಪಾಸಣೆಗೆ ಒಳಪಡಿಸಲಾಗಿದೆ. ಈ ಪೈಕಿ 8,28,884 ಜನರಿಗೆ ನೇತ್ರ ಸಂಬಂಧಿ ತೊಂದರೆಗಳು ಕಂಡು ಬಂದಿದೆ. ಹಾಗೂ 2,45,588 ಜನರಿಗೆ ದೃಷ್ಟಿದೋಷ ಇರುವುದು ಪತ್ತೆಯಾಗಿದೆ. ಸುಮಾರು 2.45 ಲಕ್ಷ ದೃಷ್ಟಿದೋಷ ಹೊಂದಿರುವ ಜನರಿಗೆ ಉಚಿತ ಕನ್ನಡಕ ವಿತರಣೆ ಮಾಡಲಾಗುತ್ತದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular