ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯು ಪ್ರಥಮ ಬಾರಿಯ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ (ಪ್ರೈಜ್ ಮನಿ) ನೀಡುತ್ತಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29-02-2024 ಆಗಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ಮತ್ತೊಮ್ಮೆ ವಿಸ್ತರಿಸಲಾಗದ ಕಾರಣ, ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಲು ಸೂಚನೆ ನೀಡಲಾಗಿದೆ. ಸಮಾಜ ಕಲ್ಯಾಣ ಇಲಾಖೆಯು ಪ್ರಥಮ ಬಾರಿಯ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ (ಪ್ರೈಜ್ ಮನಿ) ನೀಡಲಾಗುತ್ತಿದೆ.
ಆಸಕ್ತ ಅರ್ಹ ವಿದ್ಯಾರ್ಥಿಗಳು 29-02-2024 ರೊಳಗೆ ನಿಗಮದ ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ. ಹೆಚ್ಚಿನ ಮಾಹಿತಿಗಾಗಿ ಶಾಲಾ, ಕಾಲೇಜು ಕಚೇರಿ ಅಥವಾ ತಾಲೂಕು ಸಮಾಜ ಕಲ್ಯಾಣ ಇಲಾಖೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.