ಬೆಂಗಳೂರು : ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಮಾಸಿಕ ಕನಿಷ್ಠ ವೇತನ ಮತ್ತು ವ್ಯತ್ಯಾಸವಾಗುವ ತುಟ್ಟಿ ಭತ್ಯೆಯನ್ನು ಪಾವತಿಸಲು ಸರ್ಕಾರ ಆದೇಶ ಹೊರಡಿಸಿದೆ .
ಈ ಕುರಿತು ಸರ್ಕಾರದ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದು, ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಗ್ರಂಥಾಲಯ ಮೇಲ್ವಿಚಾರಕರಿಗೆ ಮಾಸಿಕ ಕನಿಷ್ಠ ವೇತನ ರೂ. 16,382.52/- ಗಳನ್ನು ಮತ್ತು ವ್ಯತ್ಯಾಸವಾಗುವ ತುಟ್ಟಿ ಭತ್ಯೆಯನ್ನು (VDA) ಪಾವತಿಸಲು ಹಾಗೂ ಗ್ರಂಥಾಲಯ ಉಪಕರವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಉಳಿಸಿಕೊಂಡು, ವ್ಯತ್ಯಾಸವಾಗುವ ಕನಿಷ್ಠ ವೇತನ ಮತ್ತು ವ್ಯತ್ಯಾಸವಾಗುವ ತುಟ್ಟಿ ಭತ್ಯೆಯನ್ನು (VDA) ಪಾವತಿಸಲು ಸರ್ಕಾರವು ನಿರ್ಣಯಿಸಿದೆ.
ಅದರಂತೆ ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಗ್ರಂಥಾಲಯ ಮೇಲ್ವಿಚಾರಕರಿಗೆ ದಿನಾಂಕ:04-09-2023 ರಿಂದ ಜಾರಿಗೆ ಬರುವಂತೆ ಮಾಸಿಕ ಕನಿಷ್ಠ ವೇತನ ರೂ. 16,382,52/- ಗಳು ಮತ್ತು ವಾರ್ಷಿಕವಾಗಿ ವ್ಯತ್ಯಾಸವಾಗುವ ತುಟ್ಟಿ ಭತ್ಯೆಯನ್ನು (VDA) ಪಾವತಿಸಲು ಆದೇಶಿಸಿದೆ. ಗ್ರಂಥಾಲಯ ಉಪಕರವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಉಳಿಸಿಕೊಂಡು. ವ್ಯತ್ಯಾಸವಾಗುವ ಕನಿಷ್ಠ ವೇತನ ಮತ್ತು ವ್ಯತ್ಯಾಸವಾಗುವ ತುಟ್ಟಿ ಭತ್ಯೆಯನ್ನು (VDA) ಪಾವತಿಸಲು ಸೂಚನೆ ನೀಡಲಾಗಿದೆ.