ಬೆಂಗಳೂರು : ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ದಂಧೆಯಲ್ಲಿ ಸಿಲುಕಿದ್ದ ಮೂವರು ಮಹಿಳೆಯರನ್ನು ರಕ್ಷಿಸಿ , ದಂಧೆ ನಡೆಸುತ್ತಿದ್ದ ವಿದೇಶಿ ಮಹಿಳೆಯನ್ನು ಬಂಧಿಸಿದ್ದಾರೆ.
ಕೂಡ್ಲು ಮುಖ್ಯ ರಸ್ತೆಯ ಸಫೀನಾ ಎಂಬಾಕೆಯನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.ಹಣದ ಆಮಿಷವೊಡ್ಡಿ ಮನೆಗೆ ಕರೆತಂದು ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿಸಿಕೊಂಡು ಅಕ್ರಮವಾಗಿ ಹಣ ಸಂಪಾದಿಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತಳಿಂದ ಮೊಬೈಲ್ ಫೋನ್ ಜಪ್ತಿ ಮಾಡಿಕೊಳ್ಳಲಾಗಿದೆ.
ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ತಿಳಿದು ಬಂದಿದೆ.