ಬೆಂಗಳೂರು : ಸಿನಿಮಾದಲ್ಲಿ ಚಾನ್ಸ್ ಕೊಡಿಸುವುದಾಗಿ ಯುವತಿಗೆ ಲೈಂಗಿಕ ದೌರ್ಜನ್ಯ ಎಸಗಿದ ನಟನ ವಿರುದ್ಧ ದೂರು ದಾಖಲಾಗಿದೆ. ಕನ್ನಡ ಸೇರಿದಂತೆ ತಮಿಳು ಭಾಷೆಯ ಚಿತ್ರಗಳಲ್ಲಿ ಪೋಷಕ ನಟ ಸೇರಿದಂತೆ ಹಲವು ಪಾತ್ರ ಮಾಡಿಕೊಂಡಿದ್ದ ನಟ ಸಂತೋಷ್ ಎಂಬಾತನ ವಿರುದ್ಧ ದೂರು ದಾಖಲಾಗಿದೆ.
ಬೆಂಗಳೂರಿನ ಜ್ಞಾನ ಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸಂತೋಷ್ ಯುವತಿಗೆ ಸಿನಿಮಾದಲ್ಲಿ ನಟಿಸಲು ಚಾನ್ಸ್ ನೀಡುತ್ತೇನೆ ಎಂದು ರಾಜ್ಯದ ಹಲವು ಕಡೆ ಸುತ್ತಾಡಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ನಂತರ ಯುವಕನಿಗೆ ಈಗಾಗಲೇ ಮದುವೆ ಆಗಿದೆ ಎಂದು ತಿಳಿದ ಯುವತಿ ಬೆಂಗಳೂರಿನ ಜ್ಞಾನ ಭಾರತಿ ಪೊಲೀಸ್ ಠಾಣೆಗೆ ಕಳೆದ 6 ತಿಂಗಳ ಹಿಂದೆ ದೂರು ನೀಡುತ್ತಾರೆ. ನಂತರ ಪ್ರಕರಣವನ್ನು ಜ್ಞಾನ ಭಾರತಿ ಠಾಣೆ ಪೊಲೀಸರು ಅತ್ತಿಬೆಲೆ ಪೊಲೀಸ್ ಠಾಣೆಗೆ ವರ್ಗಾಯಿಸಿದ್ದು, ಆದರೆ ಸಂತೋಷ್ ವಿರುದ್ಧ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ನೊಂದ ಯುವತಿ ಆರೋಪ ಮಾಡಿದ್ದಾಳೆ. ಅಲ್ಲದೇ ಈ ವಿಚಾರ ಯಾರ ಹತ್ತಿರ ಆದರೂ ಹೇಳಿದರೆ ಖಾಸಗಿ ಫೋಟೋ, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆಯೊಡ್ಡಿದ್ದನು ಎಂದು ಯುವತಿ ಆರೋಪ ಮಾಡಿದ್ದಾಳೆ.