ಉತ್ತರ ಪ್ರದೇಶ : ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದ ಆರೋಪಕ್ಕೆ ಸಂಬಂಧಿಸಿದಂತೆ 3 ದಿನಗಳಲ್ಲಿ ಉತ್ತರ ಪ್ರದೇಶದಾದ್ಯಂತ 244 ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಫೆಬ್ರವರಿ 15 ರಿಂದ ಫೆಬ್ರವರಿ 18 ರೊಳಗೆ 244 ಜನರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ರಾಜ್ಯ ಪೊಲೀಸ್ ಪ್ರಧಾನ ಕಚೇರಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ. ಉತ್ತರ ಪ್ರದೇಶ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಫೆಬ್ರವರಿ 17 ಮತ್ತು 18 ರಂದು ನಡೆದಿತ್ತು.
ವಶಕ್ಕೆ ಪಡೆದ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ ನಂತರ ವಿಚಾರಣೆ ನಡೆಸಲಾಗುತ್ತಿದೆ. ಪರೀಕ್ಷೆಗಳಲ್ಲಿ ಅಕ್ರಮ ವಿಧಾನಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾಗಿಯಾಗಿರುವ ಜನರು ಮತ್ತು ಗ್ಯಾಂಗ್ಗಳನ್ನು ಹಿಡಿಯಲಾಗುವುದು ಮತ್ತು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರ ಪ್ರದೇಶ ಪೊಲೀಸ್ ಮುಖ್ಯಸ್ಥ ಪ್ರಶಾಂತ್ ಕುಮಾರ್ ಹೇಳಿದ್ದಾರೆ.