alex Certify BREAKING : ‘CM ಸಿದ್ದರಾಮಯ್ಯ’ ಗೆ ಬಿಗ್ ರಿಲೀಫ್ : ಹೈಕೋರ್ಟ್ ಆದೇಶಕ್ಕೆ ‘ಸುಪ್ರೀಂಕೋರ್ಟ್’ ತಡೆ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘CM ಸಿದ್ದರಾಮಯ್ಯ’ ಗೆ ಬಿಗ್ ರಿಲೀಫ್ : ಹೈಕೋರ್ಟ್ ಆದೇಶಕ್ಕೆ ‘ಸುಪ್ರೀಂಕೋರ್ಟ್’ ತಡೆ..!

ಬೆಂಗಳೂರು : ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ 10 ಸಾವಿರ ದಂಡ ವಿಧಿಸಿದ ಬಗ್ಗೆ ಸುಪ್ರೀಂಕೋರ್ಟ್ ನಲ್ಲಿ ಇಂದು ವಿಚಾರಣೆ ನಡೆಸಿದ್ದು, ಮುಂದಿನ ಆದೇಶದವರೆಗೆ ವಿಚಾರಣೆಗೆ ತಡೆ ನೀಡಿದೆ.ತಮ್ಮ ವಿರುದ್ಧ ದಾಖಲಾಗಿರುವ ಎಫ್ ಐ ಆರ್ ಹಾಗೂ 10 ಸಾವಿರ ದಂಡ ವಿಧಿಸಿರುವ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ.

ಹೈಕೋರ್ಟ್ 10 ಸಾವಿರ ದಂಡ ವಿಧಿಸಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ಇಂದು ಫೆ(19) ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆದಿದೆ.

2022 ರ ಏಪ್ರಿಲ್ 14 ರಂದು ರೇಸ್ ವ್ಯೂ ಹೋಟೆಲ್ ಬಳಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಹಿನ್ನೆಲೆ ಸಚಿವರಾಗಿದ್ದ ಕೆ ಎಸ್ ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಸಿಎಂ ಸಿದ್ದರಾಮಯ್ಯ ಸೇರಿ ಹಲವಾರು ಕಾಂಗ್ರೆಸ್ ನಾಯಕರು ರೇಸ್ ಕೋರ್ಸ್ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದರು.ಪ್ರತಿಭಟನೆ ವೇಳೆ ರಸ್ತೆ ಸಂಚಾರಕ್ಕೆ ಅಡ್ಡಿಯಾದ ಹಿನ್ನೆಲೆ ಜನಪ್ರತಿನಿಧಿಗಳ ಕೋರ್ಟ್ ಸಿದ್ದರಾಮಯ್ಯ, ಸುರ್ಜೆವಾಲಾ ಸೇರಿದಂತೆ ಹಲವು ನಾಯಕರಿಗೆ ದಂಡ ವಿಧಿಸಲಾಗಿತ್ತು, ಅಲ್ಲದೇ ಸಿಎಂ ಸಿದ್ದರಾಮಯ್ಯಗೆ ಮಾ.6 ರಂದು ಕೋರ್ಟ್ ಗೆ ಹಾಜರಾಗುವಂತೆ ಸೂಚನೆ ನೀಡಿತ್ತು.

ಕಾಂಗ್ರೆಸ್ ನಾಯಕರ ವಿರುದ್ಧ ದಾಖಲಾದ ಕೇಸ್ ರದ್ದು ಮಾಡಲು ಹೈಕೋರ್ಟ್ ನಿರಾಕರಿಸಿದ್ದು, ಹೈಕೋರ್ಟ್ ನ ಈ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...