ಬೆಂಗಳೂರು : ಅನಾರೋಗ್ಯದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ವಿಶ್ರಾಂತಿ ಪಡೆಯಲು ತಮ್ಮ ನಿವಾಸಕ್ಕೆ ತೆರಳಿದ್ದಾರೆ ಎಂದು ಹೇಳಿದರು.
ಹೌದು. ಸಿಎಂ ಸಿದ್ದರಾಮಯ್ಯ ಅವರಿಗೆ ಗಂಟಲು ನೋವು ಕಾಣಿಸಿಕೊಂಡ ಹಿನ್ನೆಲೆ ವಿಶ್ರಾಂತಿ ಪಡೆಯಲು ಕಾವೇರಿ ನಿವಾಸಕ್ಕೆ ತೆರಳಿದ್ದಾರೆ. ಕಳೆದ ಕೆಲವು ದಿನಗಳಿಂದ ಬಜೆಟ್ ಸೇರಿದಂತೆ ಬಿಡುವಿಲ್ಲದ ಕೆಲಸದಲ್ಲಿ ತೊಡಗಿದ್ದ ಸಿಎಂ ಸಿದ್ದರಾಮಯ್ಯಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ವಿಶ್ರಾಂತಿ ಪಡೆಯಲು ಕಾವೇರಿ ನಿವಾಸಕ್ಕೆ ತೆರಳಿದ್ದಾರೆ. ವಿಧಾನಮಂಡದಲ್ಲಿ ಅಧಿವೇಶನ ನಡೆಯುತ್ತಿದ್ದು, ಸದ್ಯ ಸಿಎಂ ಅಧಿವೇಶನದಿಂದ ಹೊರಗುಳಿದಿದ್ದಾರೆ.
ಸತತ 3 ಗಂಟೆ 15 ನಿಮಿಷ ಸುದೀರ್ಘ ಬಜೆಟ್ ಭಾಷಣ ಮಾಡಿದ ನಂತರ 2 ದಿನ ನಿರಂತರ ಜಿಲ್ಲಾ ಪ್ರವಾಸ ಕೈಗೊಂಡಿದ್ದರು. ಈ ಹಿನ್ನೆಲೆ ಸಿದ್ದರಾಮಯ್ಯನವರಿಗೆ ಗಂಟಲು ನೋವಿನ ಸಮಸ್ಯೆ ಎದುರಾಗಿದೆ.