NWKRTC ಬಸ್ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ; 6 ಜನರಿಗೆ ಗಾಯ

ತುಮಕೂರು: ಎನ್ ಡಬ್ಲ್ಯು ಕೆ ಆರ್ ಟಿಸಿ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, 6 ಪ್ರಯಾಣಿಕರು ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ಟೋಲ್ ಬಳಿ ನಡೆದಿದೆ.

ಬೆಂಗಳೂರಿನಿಂದ ದಾವಣಗೆರೆ ತೆರಳುತ್ತಿದ್ದ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಬಸ್ ನ ಮುಂಭಾಗದ ಗಾಜು ಸಂಪೂರ್ಣ ಪುಡಿ ಪುಡಿಯಾಗಿದ್ದು, ಘಟನೆಯಲ್ಲಿ 6 ಪ್ರಯಾಣಿಕರು ಗಾಯಗೊಂಡಿದ್ದಾರೆ.

ಶಿರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ, ಬಸ್ ಮೇಲೆ ಕಲ್ಲು ತೂರಾಟ ನಡೆಸಿರುವ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read