alex Certify 11 ದಿನದಲ್ಲಿ 4321 ಅರ್ಜಿ ವಿಲೇವಾರಿ: ಇನ್ನು ವಿಭಾಗ ಮಟ್ಟದಲ್ಲೂ ‘ಜನಸ್ಪಂದನ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

11 ದಿನದಲ್ಲಿ 4321 ಅರ್ಜಿ ವಿಲೇವಾರಿ: ಇನ್ನು ವಿಭಾಗ ಮಟ್ಟದಲ್ಲೂ ‘ಜನಸ್ಪಂದನ’

ಬೆಂಗಳೂರು: ಮುಖ್ಯಮಂತ್ರಿಗಳ ಜನ ಸ್ಪಂದನದಲ್ಲಿ 4321 ಅರ್ಜಿಗಳ ವಿಲೇವಾರಿ ಮಾಡಲಾಗಿದೆ. ಫೆಬ್ರವರಿ 8ರಂದು ವಿಧಾನಸೌಧದ ಮುಂದೆ ಸಿಎಂ ಸಿದ್ಧರಾಮಯ್ಯ ಅವರು ಜನಸ್ಪಂದನ ನಡೆಸಿದ್ದು, 11 ದಿನದಲ್ಲಿ 4321 ಅರ್ಜಿಗಳ ವಿಲೇವಾರಿ ಮಾಡಲಾಗಿದೆ. ಬಾಕಿ ಅರ್ಜಿಗಳ ಸಕಾರಾತ್ಮಕ ಶೀಘ್ರ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಸೂಚನೆ ನೀಡಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜನಸ್ಪಂದನ ಕಾರ್ಯಕ್ರಮದ ಪರಾಮರ್ಶೆ ನಡೆಸಲಾಗಿದೆ. ಯೋಜನೆಯಲ್ಲಿ ಭಾಗಿಯಾದ ಅಧಿಕಾರಿಗಳ ಸಭೆ ನಡೆಸಿ ವಿವಿಧ ಸೂಚನೆ ನೀಡಲಾಗಿದೆ.

ಜನಸ್ಪಂದನ ಯಶಸ್ವಿಗೆ ಅಧಿಕಾರಿಗಳನ್ನು ಅತೀಕ್ ಅಭಿನಂದಿಸಿದ್ದಾರೆ. ಮುಂದಿನ ಹಂತದಲ್ಲಿ ವಿಭಾಗ ಮಟ್ಟದಲ್ಲಿ ಜನಸ್ಪಂದನ ನಡೆಸಲು ತೀರ್ಮಾನಿಸಲಾಗಿದೆ.  ಕಾರ್ಯಕ್ರಮ ಯಶಸ್ವಿಗೆ ಸಿಎಂ ಮೆಚ್ಚುಗೆ ವ್ಯಕ್ತಪಡಿಸಿದ್ದು, ಇನ್ನಷ್ಟು ವ್ಯವಸ್ಥಿತವಾಗಿ ಕಾರ್ಯಕ್ರಮ ನಡೆಸಬೇಕೆಂದು ಅಪೇಕ್ಷಿಸಿದ್ದಾರೆ. ವಿಭಾಗ ಮಟ್ಟದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಲು ಚಿಂತನೆ ನಡೆದಿದ್ದು, ಮೊದಲು ಕಲಬುರಗಿಯಲ್ಲಿ ಜನಸ್ಪಂದನ ನಡೆಸಲು ಉದ್ದೇಶಿಸಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಖುದ್ದು ಭಾಗವಹಿಸಲು ತಿಳಿಸಲಾಗುವುದು ಎಂದು ಹೇಳಿದ್ದಾರೆ.

ಜನಸ್ಪಂದನ ಕಾರ್ಯಕ್ರಮ ದೇಶಕ್ಕೆ ಮಾದರಿಯಾಗುವಂತೆ ನಡೆಯಬೇಕು. ಜನರ ನೋವಿಗೆ ಅಧಿಕಾರಿಗಳು ಸ್ಪಂದಿಸುತ್ತಿದ್ದಾರೆ ಎನ್ನುವ ಸಂತೃಪ್ತಿ ಹೊಂದಬೇಕು. ಅನುಷ್ಠಾನಗೊಳಿಸಲು ಸಾಧ್ಯವಿಲ್ಲದ ಅಹವಾಲಿಗೆ ಸ್ಪಷ್ಟ ಹಿಂಬರಹ ನೀಡಬೇಕು ಎಂದು ಅಧಿಕಾರಿಗಳಿಗೆ ಅತೀಕ್ ಸೂಚನೆ ನೀಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...