HomeKarnatakaಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಫೆಬ್ರವರಿ ತಿಂಗಳ ರೇಷನ್ ಜೊತೆಗೆ, 5 ಕೆ.ಜಿ ಅಕ್ಕಿ...

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಫೆಬ್ರವರಿ ತಿಂಗಳ ರೇಷನ್ ಜೊತೆಗೆ, 5 ಕೆ.ಜಿ ಅಕ್ಕಿ ಹಣ ಖಾತೆಗೆ ಜಮಾ

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ  ಫೆಬ್ರವರಿ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ.

ಅಂತ್ಯೋದಯ ಪಡಿತರ ಚೀಟಿದಾರರಿಗೆ ಕಾರ್ಡ್‍ಗೆ 35 ಕೆ.ಜಿ ಅಕ್ಕಿ, ಆದ್ಯತಾ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ 5 ಕೆ.ಜಿ ಅಕ್ಕಿ ಉಚಿತವಾಗಿ ವಿತರಿಸಲಾಗುತ್ತದೆ. ಹಾಗೂ ಪ್ರತಿ ಕೆ.ಜಿ ಗೆ ರೂ.15ರಂತೆ ಒಪ್ಪಿಗೆ ನೀಡಿದ ಎ.ಪಿ.ಎಲ್ ಏಕ ಸದಸ್ಯ ಪಡಿತರ ಚೀಟಿದಾರರಿಗೆ 5 ಕೆ.ಜಿ, ಎರಡು ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವವರಿಗೆ 10 ಕೆ.ಜಿ ಅಕ್ಕಿಯನ್ನು ವಿತರಿಸಲಾಗುವುದು.

ಸರ್ಕಾರದ ಗ್ಯಾರಂಟಿ ಯೋಜನೆಯಡಿ 5 ಕೆ.ಜಿ ಅಕ್ಕಿ ಬದಲಾಗಿ ಪಡಿತರ ಚೀಟಿದಾರರಿಗೆ ನೇರ ನಗದು ವರ್ಗಾವಣೆ ಮಾಡುತ್ತಿದ್ದು, ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದೆಂದು ಆಹಾರ ಇಲಾಖೆ ಸೂಚನೇ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular