ಬೆಂಗಳೂರು : ಏರ್ ಇಂಡಿಯಾ, ಟಾಟಾ ಅಡ್ವಾನ್ ಸ್ಡ್ ಸಿಸ್ಟಮ್ಸ್ ರಾಜ್ಯದಲ್ಲಿ ವಿವಿಧ ಯೋಜನೆಗಳಿಗೆ 2,300 ಕೋಟಿ ರೂ. ಹೂಡಿಕೆಗೆ ಮುಂದಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಂಬಿ.ಪಾಟೀಲ್ ಅವರ ಸಮ್ಮುಖದಲ್ಲಿ ಟಾಟಾ ಸಮೂಹದೊಂದಿಗೆ ಸಹಿಹಾಕಲಾಯಿತು.
ಟಾಟಾ ಸಮೂಹದ ಭಾಗವಾಗಿರುವ ಏರ್ ಇಂಡಿಯಾ ಮತ್ತು ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ ರಾಜ್ಯದಲ್ಲಿ ವಿವಿಧ ಯೋಜನೆಗಳಿಗೆ ₹ 2,300 ಕೋಟಿ ಹೂಡಿಕೆ ಮಾಡಲು ಮುಂದಾಗಿವೆ. ಈ ಸಂಬಂಧವಾಗಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಒಡಂಬಡಿಕೆಗೆ ಅಂಕಿತ ಹಾಕಲಾಯಿತು.
ಒಟ್ಟು ಹೂಡಿಕೆಯ ಪೈಕಿ ಏರ್ ಇಂಡಿಯಾ ಕಂಪನಿಯು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ವಿಮಾನಗಳ ನಿರ್ವಹಣೆ, ದುರಸ್ತಿ ಮತ್ತು ಓವರ್-ಹಾಲ್ (MRO) ಘಟಕವನ್ನು ಸ್ಥಾಪಿಸಲು ₹ 1,300 ಕೋಟಿ ಹೂಡುತ್ತಿದೆ. ಇದರಿಂದಾಗಿ 1,200 ಜನರಿಗೆ ನೇರವಾಗಿ ಉದ್ಯೋಗ ಸಿಗಲಿದ್ದು, ಪರೋಕ್ಷವಾಗಿ 25 ಸಾವಿರಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಲಿವೆ. ಭಾರತದಲ್ಲಿ ಇದು ಮೊಟ್ಟಮೊದಲ ಯೋಜನೆಯಾಗಿದೆ ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ಹೆಚ್ಚುವರಿಯಾಗಿ, ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (TASL) ₹ 1,030 ಕೋಟಿ ಹೂಡಿಕೆಯ 3 ಹೊಸ ಯೋಜನೆಗಳನ್ನು ಪ್ರಾರಂಭಿಸಲು ಸಜ್ಜಾಗಿದೆ. ಪ್ರಯಾಣಿಕರಿಂದ ಸರಕು ಸಾಗಣೆ ವಿಮಾನಗಳ ಪರಿವರ್ತನೆ ಮತ್ತು ಗನ್ ಉತ್ಪಾದನಾ ಸೌಲಭ್ಯವನ್ನು₹ 310 ಕೋಟಿಗಳಲ್ಲಿ ಸ್ಥಾಪಿಸಲಿದೆ ಎಂದು ತಿಳಿಸಿದ್ದಾರೆ.