ಬೆಂಗಳೂರು : ಸರ್ಕಾರಿ ಜಮೀನಿನಲ್ಲಿ ಮನೆ ನಿರ್ಮಿಸಿಕೊಂಡವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಶೀಘ್ರವೇ 50 ಸಾವಿರ ʻಅಕ್ರಮ-ಸಕ್ರಮʼ ಅರ್ಜಿ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವ ಕೃಷ್ಣಬೈರೇಗೌಡ ಅವರು, 2015 ರ ಪೂರ್ವದಲ್ಲಿ ಸರ್ಕಾರಿ ಜಮೀನಿನಲ್ಲಿ ನಿರ್ಮಿಸಿರುವ ಮನೆಗಳನ್ನು ಸಕ್ರಮಗೊಳಿಸುವ ಕಾರ್ಯ ಪ್ರಗತಿಯಲ್ಲಿದ್ದು, ಬಾಕಿ ಇರುವ 50 ಸಾವಿರ ಅರ್ಜಿಗಳನ್ನು ಶೀಘ್ರದಲ್ಲಿಯೇ ವಿಲೇವಾರಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಅಕ್ರಮ ಮನೆಗಳನ್ನು ಸಕ್ರಮಗೊಳಿಸಲು 94ಸಿ, 94ಸಿಸಿ ಅಡಿ ಅವಕಾಶ ಕಲ್ಪಿಸಲಾಗಿದೆ. ಬಾಕಿ ಉಳಿದಿರುವ 50 ಸಾವಿರ ಅರ್ಜಿಗಳನ್ನು ಶೀಘ್ರವೇ ಇತ್ಯರ್ಥಪಡಿಸಲಾಗುವುದು ಎಂದು ಹೇಳಿದ್ದಾರೆ.