ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಶೀಘ್ರವೇ 1,000 ʻಗ್ರಾಮಲೆಕ್ಕಿಗʼ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.
ಈ ಕುರಿತು ವಿಧಾನಪರಿಷತ್ ನಲ್ಲಿ ಮಾಹಿತಿ ನೀಡಿದ ಸಚಿವರು, ಕಂದಾಯ ಇಲಾಖೆಯ ಕೆಲಸಗಳನ್ನು ಮತ್ತಷ್ಟು ಚುರುಕುಗೊಳಿಸುವ ಸಂಬಂಧ 1,000 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.
ಕಂದಾಯ ಇಲಾಖೆಯಲ್ಲಿ ಜನರ ಸಮಸ್ಯೆಗಳನ್ನು ಬೇಗ ಪರಿಹರಿಸುವ ನಿಟ್ಟಿನಲ್ಲಿ1,000 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.