HomeKarnatakaBIG NEWS: ನಮ್ಮ ಮೆಟ್ರೋದಲ್ಲಿ ಮತ್ತೆ ತಾಂತ್ರಿಕ ದೋಷ; ಪ್ರಯಾಣಿಕರ ಪರದಾಟ

BIG NEWS: ನಮ್ಮ ಮೆಟ್ರೋದಲ್ಲಿ ಮತ್ತೆ ತಾಂತ್ರಿಕ ದೋಷ; ಪ್ರಯಾಣಿಕರ ಪರದಾಟ

ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ ತಾಂತ್ರಿಕ ದೋಷದಿಂದಾಗಿ ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರದಲ್ಲಿ ವ್ಯತ್ಯವವಾಗಿದೆ. ಬೆಳ್ಳಂಬೆಳಿಗ್ಗೆ ಮೆಟ್ರೋ ಪ್ರಯಾಣಿಕರಿಗೆ ಸಮಸ್ಯೆಯಾಗಿದ್ದು, ಮೆಟ್ರೋ ನಿಲ್ದಾಣದಲ್ಲಿಯೇ ಪ್ರಯಾಣಿಕರು ಪರದಾಡಿದ್ದಾರೆ.

ಬೈಯ್ಯಪ್ಪನಹಳ್ಳಿಯಿಂದ ಗರುಡಾಚಾರ್ ಪಾಳ್ಯ ನಡುವೆ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಿದೆ. ಇದರಿಂದಾಗಿ ಮೆಟ್ರೋ ಪ್ರಯಾಣಿಕರಿಗೆ ಭಾರಿ ಸಮಸ್ಯೆಯಾಗಿದೆ. ನಗರದ ಹಲವು ಮೆಟ್ರೋ ನಿಲ್ದಾಣಗಳಲ್ಲಿ ಜನದಟ್ಟಣೆಯುಂಟಾಗಿದೆ.

ಮೆಟ್ರೋ ನಿಲ್ದಾಣದಲ್ಲಿಯೇ ನಿಲ್ಲಬೇಕಾದ ಸ್ಥಿತಿಯಿಂದಾಗಿ ಸಾವಿರಾರು ಜನರು ಕಚೇರಿಗಳಿಗೆ ತೆರಳಲು ತಡವಾಗಿ ಪರದಾಡಿದ್ದಾರೆ. ಈ ನಡುವೆ ನೇರಳೆ ಮಾರ್ಗ ಮೆಟ್ರೋ ಸಂಚಾರದಲ್ಲಿ ತಾಂತ್ರಿಕ ದೋಷ ಉಂತಾಗಿದ್ದು, ಆದಷ್ಟು ಬೇಗ ಸಮಸ್ಯೆ ಸರಿಪಡಿಸುವುದಾಗಿ ಬಿಎಂಆರ್ ಸಿಎಲ್ ತಿಳಿಸಿದೆ. ಪ್ರಯಾಣಿಕರಿಗೆ ಆದ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸುವುದಾಗಿ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular