ಬೆಂಗಳೂರು : ನೇರಳೆ ಮಾರ್ಗದಲ್ಲಿ ತಾಂತ್ರಿಕ ದೋಷ ಸರಿಯಾಗಿದ್ದು, ಮತ್ತೆ ‘ನಮ್ಮ ಮೆಟ್ರೋ’ ಸಂಚಾರ ಪುನಾರಂಭವಾಗಿದೆ ಎಂದು ಬಿಎಂಆರ್ ಸಿಎಲ್ ಪ್ರಕಟಣೆ ಹೊರಡಿಸಿದೆ.
ನೇರಳೆ ಮಾರ್ಗದಲ್ಲಿ ತಾಂತ್ರಿಕ ದೋಷವನ್ನು ಬೆಳಿಗ್ಗೆ 9.20 ಕ್ಕೆ ಸರಿಪಡಿಸಲಾಗಿದೆ ಮತ್ತು ರೈಲುಗಳು ನಿಗದಿತ ವೇಗದಲ್ಲಿ ಚಲಿಸುತ್ತಿವೆ, ಆದ ಅನಾನುಕೂಲತೆಗೆ ವಿಷಾದಿಸುತ್ತೇವೆ ಎಂದು ಬಿಎಂಆರ್ ಸಿಎಲ್ ಪ್ರಕಟಣೆ ಹೊರಡಿಸಿದೆ.
ನಮ್ಮ ಮೆಟ್ರೋ ರೈಲಿನಲ್ಲಿ ತಾಂತ್ರಿಕ ದೋಷದಿಂದಾಗಿ ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರದಲ್ಲಿ ವ್ಯತ್ಯವವಾಗಿದೆ. ಬೆಳ್ಳಂಬೆಳಿಗ್ಗೆ ಮೆಟ್ರೋ ಪ್ರಯಾಣಿಕರಿಗೆ ಸಮಸ್ಯೆಯಾಗಿದ್ದು, ಮೆಟ್ರೋ ನಿಲ್ದಾಣದಲ್ಲಿಯೇ ಪ್ರಯಾಣಿಕರು ಪರದಾಡಿದ್ದಾರೆ.ಬೈಯ್ಯಪ್ಪನಹಳ್ಳಿಯಿಂದ ಗರುಡಾಚಾರ್ ಪಾಳ್ಯ ನಡುವೆ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಿದೆ. ಇದರಿಂದಾಗಿ ಮೆಟ್ರೋ ಪ್ರಯಾಣಿಕರಿಗೆ ಭಾರಿ ಸಮಸ್ಯೆಯಾಗಿದೆ. ನಗರದ ಹಲವು ಮೆಟ್ರೋ ನಿಲ್ದಾಣಗಳಲ್ಲಿ ಜನದಟ್ಟಣೆಯುಂಟಾಗಿತ್ತು. ಮೆಟ್ರೋ ನಿಲ್ದಾಣದಲ್ಲಿಯೇ ನಿಲ್ಲಬೇಕಾದ ಸ್ಥಿತಿಯಿಂದಾಗಿ ಸಾವಿರಾರು ಜನರು ಕಚೇರಿಗಳಿಗೆ ತೆರಳಲು ಪರದಾಡಿದ್ದರು.