HomeKarnatakaBIG NEWS: ರತ್ನಪುರಿ ಗ್ರಾಮದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ

BIG NEWS: ರತ್ನಪುರಿ ಗ್ರಾಮದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ

ಮೈಸೂರು: ವಿದ್ಯಾರ್ಥಿಯೋರ್ವನನ್ನು ಕೊಲೆಗೈದು ನೇಣು ಹಾಕಿರುವ ಆರೋಪ ಕೇಳಿಬಂದಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ರತ್ನಪುರಿ ಗ್ರಾಮದಲ್ಲಿ ವಿದ್ಯಾರ್ಥಿಯೋರ್ವನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮುತ್ತುರಾಜ್ ಎಂಬ ವಿದ್ಯಾರ್ಥಿ ಶವ ಪತ್ತೆಯಾಗಿದೆ. ಪೋಷಕರು ಹಾಗೂ ಕುಟುಂಬದವರು ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಆರೋಪಿಸಿದ್ದರೆ, ಮುತ್ತುರಾಜ್ ದಾಸನಪುರದ ರವಿಕುಮಾರ್ ಹಾಗೂ ವಸಂತಾ ದಂಪತಿ ಪುತ್ರ.

ಅನ್ಯಕೋಮಿನ ಯುವತಿ ಜೊತೆ ಮಾತನಾಡಿದ್ದಕ್ಕೆ ಯುವತಿಯ ಕಡೆಯವರು ವಿದ್ಯಾರ್ಥಿಯನ್ನು ಕೊಲೆಗೈದು ನೇಣು ಹಾಕಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಹುಣಸೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular