HomeKarnatakaBREAKING NEWS: ವಸತಿ ಶಾಲೆಗಳಲ್ಲಿ ಘೋಷವಾಕ್ಯ ಯಥಾಸ್ಥಿತಿಗೆ; ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಸೂಚನೆ

BREAKING NEWS: ವಸತಿ ಶಾಲೆಗಳಲ್ಲಿ ಘೋಷವಾಕ್ಯ ಯಥಾಸ್ಥಿತಿಗೆ; ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಸೂಚನೆ

ಬೆಂಗಳೂರು: ವಸತಿ ಶಾಲೆಗಳಲ್ಲಿ ಘೋಷವಾಕ್ಯ ಬದಲಾವಣೆ ವಿಚಾರ ತೀವ್ರ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ಎಚ್ಚೆತ್ತ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್, ಘೋಷವಾಕ್ಯ ಯಥಾಸ್ಥಿತಿಯಲ್ಲಿಡುವಂತೆ ಸೂಚನೆ ನೀಡಿದ್ದಾರೆ.

ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕರ್ಯದರ್ಶಿ ಮಣಿವಣ್ಣನ್ ಅವರ ಆದೇಶದ ಹಿನ್ನೆಲೆಯಲ್ಲಿ ವಸತಿ ಶಾಲೆಗಳ ಘೋಷವಾಕ್ಯವನ್ನು ‘ಜ್ಞಾನ ದೇಗುಲವಿದು ಕೈಮುಗಿದು ಒಳಗೆ ಬನ್ನಿ’ ಬದಲಾಗಿ ‘ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ’ ಎಂದು ಬದಲಿಸಲಾಗಿತ್ತು. ರಾಷ್ಟ್ರಕವಿ ಕುವೆಂಪು ಅವರ ಘೋಷವಾಕ್ಯವನ್ನೇ ಬದಲಾವಣೆ ಮಾಡಿದ್ದ ಇಲಾಖೆಯ ಕ್ರಮಕ್ಕೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

ರಾಷ್ಟ್ರಕವಿ ಕುವೆಂಪುಗೆ ಮಾಡಿದ ಅವಮಾನ ಎಂಬ ಆರೋಪ ಕೇಳಿಬಂದಿತ್ತು. ಅಲ್ಲದೇ ಘೋಷವಾಕ್ಯ ಬದಲಾವಣೆ ರಾಜಕೀಯ ತಿರುವು ಕೂಡ ಪಡೆದುಕೊಂಡಿತ್ತು. ವಸತಿ ಶಾಲೆಯ ಘೋಷವಾಕ್ಯ ಬದಲಾವಣೆ ವಿಚಾರ ತೀವ್ರ ಚರ್ಚೆಗೆ ಗ್ರಸವಾದ ಬೆನ್ನಲ್ಲೇ ಇದೀಗ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್, ಎಲ್ಲಾ ವಸತಿ ಶಾಲೆಗಳಲ್ಲಿಯೂ ಘೋಷವಾಕ್ಯ ಯಥಾಸ್ಥಿತಿಯಲ್ಲಿಯೇ ಇಡುವಂತೆ ಟೆಲಿಗ್ರಾಂ ಮೂಲಕ ಶಾಲೆಗಳಿಗೆ ಸೂಚನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular