ನವದೆಹಲಿ: ದೆಹಲಿಯಿಂದ ಶ್ರೀನಗರಕ್ಕೆ ತೆರಳುತ್ತಿದ್ದ ಇಂಡಿಗೊ ವಿಮಾನದಲ್ಲಿ ಸೋಮವಾರ ತೀವ್ರ ಪ್ರಕ್ಷುಬ್ಧತೆ ಕಾಣಿಸಿಕೊಂಡ ನಂತರ ಪ್ರಯಾಣಿಕರು ಭಯಭೀತರಾಗಿದ್ದಾರೆ.
ಪ್ರತಿಕೂಲ ಹವಾಮಾನದಿಂದಾಗಿ ಶ್ರೀನಗರಕ್ಕೆ ತೆರಳುತ್ತಿದ್ದ ವಿಮಾನವು ಭಾರಿ ಪ್ರಕ್ಷುಬ್ಧತೆಯನ್ನು ಅನುಭವಿಸಿತು. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ, ಇದರ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಸೋಷಿಯಲ್ ಮೀಡಿಯಾ ಪ್ಲಾಟ್ಫಾರ್ಮ್ಗಳಲ್ಲಿ ಹರಿದಾಡುತ್ತಿರುವ ಈ ಘಟನೆಯ ವೀಡಿಯೊದಲ್ಲಿ, ವಿಮಾನವು ನಡುಗುತ್ತಿದ್ದಂತೆ ಪ್ರಯಾಣಿಕರು ತಮ್ಮ ಕುರ್ಚಿಗಳನ್ನು ಹಿಡಿದಿರುವುದನ್ನು ಕಾಣಬಹುದು. ಸೋಮವಾರ ಸಂಜೆ ೫.೩೦ ಕ್ಕೆ ವಿಮಾನ ದೆಹಲಿಯಿಂದ ಹೊರಟಿತು. ಅದು ಶ್ರೀನಗರದಲ್ಲಿ ಸುರಕ್ಷಿತವಾಗಿ ಇಳಿಯಿತು. ದೆಹಲಿಯಿಂದ ಶ್ರೀನಗರಕ್ಕೆ ತೆರಳುತ್ತಿದ್ದ ಇಂಡಿಗೊ ವಿಮಾನ 6ಇ6125 ತೀವ್ರ ಪ್ರಕ್ಷುಬ್ಧ ಹವಾಮಾನವನ್ನು ಎದುರಿಸಿತು. ಸಿಬ್ಬಂದಿ ಎಲ್ಲಾ ಕಾರ್ಯಾಚರಣೆಯ ಪ್ರೋಟೋಕಾಲ್ಗಳನ್ನು ಅನುಸರಿಸಿದರು ಮತ್ತು ವಿಮಾನವು ಶ್ರೀನಗರದಲ್ಲಿ ಸುರಕ್ಷಿತವಾಗಿ ಇಳಿಯಿತು. ಪ್ರತಿಕೂಲ ಹವಾಮಾನದಿಂದಾಗಿ ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗೆ ನಾವು ವಿಷಾದಿಸುತ್ತೇವೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.