ಬೆಂಗಳೂರು : ರಾಜ್ಯದಲ್ಲಿ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಮಹತ್ವದ ಕ್ರಮ ಕೈಗೊಳ್ಳಲಾಗಿದ್ದು, ರಾಜ್ಯಾದ್ಯಂತ 45 CEN ಪೊಲೀಸ್ ಠಾಣೆಗಳನ್ನು ಪ್ರಾರಂಭಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವರು, ರಾಜ್ಯದಲ್ಲಿ ಅಪರಾಧಗಳನ್ನು ತಡೆಗಟ್ಟಲು ಹಲವಾರು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಾತ್ರಿ ಗಸ್ತಿಗಾಗಿ ಇ- ಬೀಟ್, ಜೈಲಿನಿಂದ ಹೊರ ಬರುತ್ತಿರುವ ಆರೋಪಿಗಳ ಮೇಲೆ ನಿಗಾ, ನಿಯಮಿತವಾಗಿ ರೌಡಿ ಪೆರೇಡ್, ಮಟ್ಕಾ, ಜೂಜಾಟ, ಅಕ್ರಮ ಮದ್ಯ ಮಾರಾಟದ ವಿರುದ್ಧ ನಿರಂತರ ದಾಳಿ ನಡೆಸುವಿಕೆ, ಘೋರ ಅಪರಾಧ ಪ್ರಕರಣಗಳಲ್ಲಿ ಆರೋಪಿಗಳಿಗೆ ಜಾಮೀನು ಸಿಗದಂತೆ ಮಾಡುವ ನಿಟ್ಟಿನಲ್ಲಿ ನ್ಯಾಯಾಲಯಕ್ಕೆ ಶೀಘ್ರವಾಗಿ ಅಂತಿಮ ವರದಿ ಸಲ್ಲಿಸುವುದು, ಸಿಸಿಟಿವಿ ಕ್ಯಾಮರಾಗಳ ಅಳವಡಿಕೆ, ಮಹಿಳಾ ಸುರಕ್ಷತೆಗೆ ರಾಣಿ ಚೆನ್ನಮ್ಮ ಪಡೆ ಸ್ಥಾಪನೆ, ಸುಳ್ಳು ಸುದ್ದಿ, ದ್ವೇಷದ ಪೋಸ್ಟ್ಗಳನ್ನು ಹಾಕುವವರ ವಿರುದ್ಧ ಪ್ರಕರಣ ದಾಖಲು ಸೇರಿದಂತೆ ರಾಜ್ಯದಲ್ಲಿ ಸೈಬರ್, ಆರ್ಥಿಕ, ಮಾದಕ ದ್ರವ್ಯಗಳ ಅಪರಾಧವನ್ನು ತಡೆಗಟ್ಟಲು ರಾಜ್ಯಾದ್ಯಂತ 45 CEN ಪೊಲೀಸ್ ಠಾಣೆಗಳನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದ್ದಾರೆ.