ಬೆಂಗಳೂರು : ಅಧಿಕಾರಕ್ಕೆ ಬಂದ 9 ತಿಂಗಳಲ್ಲಿ ನಮ್ಮ ಸರ್ಕಾರ 77 ಸಾವಿರ ಕೋಟಿ ಹೂಡಿಕೆ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ನಾವು ಅಧಿಕಾರಕ್ಕೆ ಬಂದ 9 ತಿಂಗಳಲ್ಲಿ ರಾಜ್ಯಕ್ಕೆ ₹ 77 ಸಾವಿರ ಕೋಟಿ ಬಂಡವಾಳ ಹರಿದು ಬಂದಿದೆ. ಬಂಡವಾಳ ಹೂಡಿಕೆಗೂ, ಕಾನೂನು ಸುವ್ಯವಸ್ಥೆಗೂ ನೇರಾ ನೇರ ಸಂಬಂಧ ಇರುತ್ತದೆ. ಸರ್ಕಾರದ ಕಡಿಮೆ ಅವಧಿಯಲ್ಲೇ ಇಷ್ಟೊಂದು ಪ್ರಮಾಣದ ಹೂಡಿಕೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸುಗಮ ಆಗಿರುವುದಕ್ಕೆ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.