ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ರಾಜ್ಯದ ಪ್ರಗತಿಗೆ ಪೂರಕವಾಗಿದೆ ಎಂದು ನಟಿ ಹಾಗೂ ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ಹೇಳಿದರು.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಉಮಾಶ್ರೀ ‘ಸರ್ಕಾರದ ಪಂಚ ಗ್ಯಾರಂಟಿಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಯುವನಿಧಿ ಯೋಜನೆಗಳಿಂದ ರಾಜ್ಯದ ಸುಮಾರು ನಾಲ್ಕೂವರೆ ಕೋಟಿ ಜನ ಪ್ರಯೋಜನ ಪಡೆಯುತ್ತಿದ್ದಾರೆ. ಈ ಯೋಜನೆಗಳು ರಾಜ್ಯದ 7 ಕೋಟಿ ಜನರ ಬದುಕಿನಲ್ಲಿ ಬದಲಾವಣೆ ತಂದಿವೆ. ಬಸವಣ್ಣನವರ ನ್ಯಾಯ ಸಿದ್ದಾಂತಗಳು ಸರ್ಕಾರಕ್ಕೆ ಪ್ರೇರಣೆಯಾಗಿವೆ’ ಎಂದು ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ತಿಳಿಸಿದ್ದಾರೆ.