ರಿಷಬ್ ಶೆಟ್ಟಿ ನಟನೆಯ ‘ಕಾಂತಾರ’ ಚಿತ್ರದ ಬಳಿಕ ಇದೀಗ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ ‘ಕರಾವಳಿ’ ಚಿತ್ರ ಭರ್ಜರಿ ಸೌಂಡ್ ಮಾಡುತ್ತಿದೆ. ಇತ್ತೀಚಿಗಷ್ಟೇ ನಾಯಕಿಯ ಪಾತ್ರವನ್ನು ಪರಿಚಯಿಸಿದ್ದ ಚಿತ್ರ ತಂಡ ಇದೀಗ ಮುಹೂರ್ತ ಸಮಾರಂಭವನ್ನು ನೆರವೇರಿಸಿದೆ.
ಚಂದ್ರಶೇಖರ್ ಬಂಡಿಯಪ್ಪ ಈ ಚಿತ್ರದ ಕಥೆ ಬರೆದಿದ್ದು, ಗುರುದತ್ತ ಗಾಣಿಗ ನಿರ್ದೇಶಿಸಿದ್ದಾರೆ. ಪ್ರಜ್ವಲ್ ದೇವರಾಜ್ ಗೆ ಜೋಡಿಯಾಗಿ ಕಿರುತೆರೆ ನಟಿ ಸಂಪದ ಅಭಿನಯಿಸಿದ್ದು, ಕಾಮಿಡಿ ಕಿಲಾಡಿಗಳು ಖ್ಯಾತಿಯ ಗೋವಿಂದೇಗೌಡ ಕೂಡ ಪ್ರಮುಖ ಪಾತ್ರ ಒಂದರಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರವೀಣ್ ಸಂಕಲನ, ಅಭಿಮನ್ಯು ಸದಾನಂದನ್ ಛಾಯಾಗ್ರಹಣ ಹಾಗೂ ಸಚಿನ್ ಬಸ್ರೂರು ಸಂಗೀತ ಸಂಯೋಜನೆ ನೀಡಿದ್ದಾರೆ. ಗುರುದತ್ತ ಗಾಣಿಗ ತಮ್ಮ ಗುರುದತ್ತ ಫಿಲಂಸ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡಿದ್ದಾರೆ.