ಬೆಂಗಳೂರು : ಬಗರ್ ಹುಕುಂ ಸಾಗುವಳಿದಾರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದ್ದು, ಅನರ್ಹಗೊಂಡ ಅರ್ಜಿ ಪುನರ್ ಪರಿಶೀಲನೆ ಮಾಡಲು ಸರ್ಕಾರ ನಿರ್ಧರಿಸಿದೆ.
ಸರ್ಕಾರಿ ಜಮೀನುಗಳಲ್ಲಿನ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವ ʼಬಗರ್ ಹುಕುಂʼ ಯೋಜನೆಯಡಿಯಲ್ಲಿ ತಿರಸ್ಕೃತಗೊಂಡಿರುವ ಅರ್ಜಿಗಳನ್ನು ಪುನರ್ ಪರಿಶೀಲಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ತಿರಸ್ಕೃತ ಅಥವಾ ಅನರ್ಹಗೊಂಡ ಬಗರ್ ಹುಕುಂ ಅರ್ಜಿಗಳಲ್ಲಿ ತಪ್ಪಾಗಿದ್ದರೆ, ನಿಯಮ ಮೀರಿ ಅನರ್ಹಗೊಂಡಿದ್ದರೆ ಮತ್ತೊಮ್ಮೆ ಪುನರ್ ಪರಿಶೀಲನೆಗೆ ಸೂಚಿಸಲಾಗುವುದು” ಎಂದು ಸಚಿವರು ಭರವಸೆ ನೀಡಿದರು.