ಬೆಂಗಳೂರು : ಬೆಂಗಳೂರು ಶಿಕ್ಷಕರ ಕ್ಷೇತ್ರ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಜಯ ಗಳಿಸಿದ್ದಾರೆ. ರಂಗನಾಥ ವಿರುದ್ಧ ಪುಟ್ಟಣ್ಣ 1500 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಮಂಗಳವಾರ ಬೆಂಗಳೂರು ಶಿಕ್ಷಕರ ಕ್ಷೇತ್ರ ಉಪ ಚುನಾವಣೆ-2024ರ ಮತ ಎಣಿಕೆ ನಡೆದಿದ್ದು, ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಎ. ಪಿ. ರಂಗನಾಥ್ ಕಣಕ್ಕಿಳಿದಿದ್ದರು. ವಿಧಾನ ಪರಿಷತ್ ಸದಸ್ಯರಾಗಿದ್ದ, ಬಿಜೆಪಿಯಲ್ಲಿದ್ದ ಪುಟ್ಟಣ್ಣ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ ಕಾರಣಕ್ಕೆ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿದೆ. ಮೊದಲ ಸುತ್ತಿನ ಎಣಿಕೆಯಲ್ಲಿಯೇ 4 ಬಾರಿ ಎಂಎಲ್ಸಿ ಪುಟ್ಟಣ್ಣ ಮುನ್ನಡೆ ಕಾಯ್ದುಕೊಂಡಿದ್ದರು.
ಕರ್ನಾಟಕದ ವಿಧಾನಸಭೆ ಚುನಾವಣೆ 2023ರಲ್ಲಿ ಕಣಕ್ಕಿಳಿಯಲು ಪುಟ್ಟಣ್ಣ ಬಿಜೆಪಿ ತೊರೆದಿದ್ದರು. ಪರಿಷತ್ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದರು. ಕಾಂಗ್ರೆಸ್ ಸೇರಿದ್ದ ಅವರು ಬೆಂಗಳೂರಿನ ರಾಜಾಜಿನಗರ ಕ್ಷೇತ್ರದ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಇದೀಗ ಬೆಂಗಳೂರು ಶಿಕ್ಷಕರ ಕ್ಷೇತ್ರ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಜಯ ಗಳಿಸಿದ್ದಾರೆ ಎಂದು ತಿಳಿದು ಬಂದಿದೆ.