ಬೆಂಗಳೂರು : ರಾಜ್ಯದಲ್ಲಿರುವ ಖಾಸಗಿ ಶಿಕ್ಷಣ ಸಂಸ್ಥೆಗಳು ಮುಂದಿನ ಒಂದು ವರ್ಷದೊಳಗೆ ಮೂಲಸೌಕರ್ಯ ಕಲ್ಪಿಸಿಕೊಳ್ಳದೇ ಇದ್ದಲ್ಲಿ ಅವುಗಳ ಮಾನ್ಯತೆ ರದ್ದುಪಡಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವರು, ರಾಜ್ಯದಲ್ಲಿರುವ ಅನೇಕ ಖಾಸಗಿ ಶಾಲೆಗಳಲ್ಲಿ ಮೂಲಸೌಲಭ್ಯಗಳೇ ಇಲ್ಲ. ಆದರೆ ವಿದ್ಯಾರ್ಥಿಗಳಿದ್ದಾರೆ. ಒಮ್ಮೆಲೆ ಅಂತಹ ಶಾಲೆಗಳನ್ನು ಮುಚ್ಚಿಸಿದರೆ, ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗಲಿದೆ ಎಂಬ ಕಾರಣಕ್ಕೆ ಒಂದು ವರ್ಷ ಕಾಲಾವಕಾಶ ನೀಡಲಾಗಿದೆ. ಅಷ್ಟರೊಳಗೆ ಮೂಲಸೌಕರ್ಯ ಕಲ್ಪಿಸಿಕೊಳ್ಳದೇ ಇದ್ದಲ್ಲಿ ಅಂತಹ ಶಾಲೆಗಳ ಮಾನ್ಯತೆ ರದ್ದುಪಡಿಸಲಾಗುವುದು ಎಂದು ಹೇಳಿದ್ದಾರೆ.