ಗ್ರಾಮಗಳ ಅಭಿವೃದ್ಧಿಗೆ ಮಹತ್ವದ ಕ್ರಮ : ಗ್ರಾ.ಪಂ.ಗಳಲ್ಲೂʻಬಜೆಟ್ ಮಂಡನೆʼ

ಬೆಂಗಳೂರು : ರಾಜ್ಯದ ಗ್ರಾಮಪಂಚಾಯಿತಿಗಳ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಗ್ರಾಮಪಂಚಾಯಿತಿಗಳಲ್ಲಿ ಬಜೆಟ್‌ ಮಂಡಿಸುವಂತೆ  ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ ನೀಡಿದ್ದಾರೆ.

ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಚಿವರು, ಗ್ರಾಮ ಪಂಚಾಯತಿ ಆಡಳಿತದಲ್ಲಿ ಪಾರದರ್ಶಕತೆ ಹೆಚ್ಚಿಸುವ ಹಾಗೂ ಗ್ರಾಮ ಪಂಚಾಯತಿಗಳಲ್ಲಿ ವಿತ್ತೀಯ ಶಿಸ್ತಿನ ಅರಿವು ಮೂಡಿಸುವ ನಿಟ್ಟಿನಲ್ಲಿ ಇನ್ಮುಂದೆ ಗ್ರಾಮ ಪಂಚಾಯತಿಗಳಲ್ಲಿಯೂ‌ ಬಜೆಟ್‌ ಮಂಡಿಸಿ ಅನುಮೋದನೆ ಪಡೆಯುವಂತೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳ ಅಧ್ಯಕ್ಷರುಗಳಿಗೆ ಪತ್ರ ಬರೆದಿದ್ದೇನೆ ಎಂದು ತಿಳಿಸಿದ್ದಾರೆ.

ಅಭಿವೃದ್ಧಿ ಯೋಜನೆಗಳನ್ನು ಒಳಗೊಂಡ ಗ್ರಾ.ಪಂ ಆಯವ್ಯಯವನ್ನು ಕಡ್ಡಾಯವಾಗಿ ತಯಾರಿಸಿ ಇದೇ ಮಾರ್ಚ್‌ 10ನೇ ದಿನಾಂಕದೊಳಗೆ ಗ್ರಾಮ ಪಂಚಾಯಿತಿ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಳ್ಳಬೇಕು ಎಂದು ಪತ್ರದ ಮೂಲಕ ತಿಳಿಸಲಾಗಿದೆ.

ಪ್ರಗತಿಯೆಡೆಗಿನ ಈ ಹಾದಿಯಲ್ಲಿ ಈ ಪಂಚಾಯತ್ ರಾಜ್ ವ್ಯವಸ್ಥೆಯ ಎಲ್ಲರೂ ಉತ್ತರದಾಯಿಯಾಗಿ ಕಾರ್ಯನಿರ್ವಹಿಸಬೇಕೆಂದು ಕೋರಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read