ಬೆಂಗಳೂರು : ವಿಧಾನಸಭೆಯಲ್ಲಿ ಈಗಾಗಲೇ ಅಂಗೀಕಾರಗೊಂಡಿದ್ದ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ(ನಾಮಪಲಕಗಳಲ್ಲಿ ಶೇ. 60 ಕನ್ನಡ) ವಿಧಾನಪರಿಷತ್ ನಲ್ಲೂ ಅಂಗೀಕಾರಗೊಂಡಿದೆ.
ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯ್ದೆ ಅನ್ವಯ ಬೆಂಗಳೂರಿನ ಎಲ್ಲಾ ಅಂಗಡಿ, ಮುಂಗಟ್ಟುಗಳು, ಕಂಪನಿಗಳು, ಸಂಸ್ಥೆಗಳು, ವಾಣಿಜ್ಯ ಮಳಿಗೆಗಳು, ಕಾರ್ಖಾನೆಗಳು, ಸಂಘ-ಸಂಸ್ಥೆಗಳು ಸೇರಿದಂತೆ ಎಲ್ಲಾ ರೀತಿಯ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಬಳಕೆ ಕಡ್ಡಾಯವಾಗಿದೆ.
ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ನಾಮಫಲಕ ಹಾಕಲು ಇದೇ ಫೆಬ್ರವರಿ ೨೮ ಕೊನೆಯ ದಿನವಾಗಿದೆ. ಈ ಆದೇಶ ಪಾಲನೆ ಮಾಡದವರ ಪರವಾನಗಿ ರದ್ದು ಮಾಡಲು ನಿರ್ಧರಿಸಲಾಗಿದೆ.