ಬೆಳಗಾವಿ : ರಾಜ್ಯದಲ್ಲಿ ಮತ್ತೊಂದು ಅತ್ಯಾಚಾರದ ಪ್ರಕರಣ ಬೆಳಕಿಗೆ ಬಂದಿದ್ದು, ಮೂವರು ಅಪ್ರಾಪ್ತೆಯರ ಮೇಲೆ ಮೂವರು ಕಾಮುಕರು ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪ್ರೇಮಿಗಳ ದಿನದಂದು ಮೂವರು ಅಪ್ರಾಪ್ತೆಯರ ಮೇಲೆ ಅತ್ಯಾಚಾರ ನಡೆದಿದೆ. ರಾಯಬಾಗ ಪೊಲೀಸ್ ಠಾಣೆ ವ್ಯಾಪ್ತಿಯ ಅದ್ಧೂರಿ ಅಲಿಯಾಸ್ ಹಾಲಪ್ಪ ಸುರೇಶ ಬಬಲೇಶ್ವರ್, ಹಾಲಪ್ಪ ಗಿಡ್ಡವ್ವಗೋಳ ಮತ್ತು ಗೋಪಾಲ್ ಗಾಡಿವಡ್ಡರ್ ಬಂಧಿತ ಆರೋಪಿಗಳು ಎನ್ನಲಾಗಿದೆ.
ಫೆಬ್ರವರಿ 14 ರಂದು ಮೂವರು ಬಾಲಕಿಯರನ್ನು ತೋಟಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ. ಬಳಿಕ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸದ್ಯ ಘಟನೆ ಸಂಬಂಧ ರಾಯಬಾಗ ಪೊಲೀಸ್ ಠಾಣೆಯಲ್ಲಿ ಮೂವರು ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿದೆ.