ಬೆಂಗಳೂರು : ಶ್ರೀಮಂತರಿಂದ ತೆರಿಗೆಯನ್ನು ಕಾನೂನು ರೀತಿ ಸಂಗ್ರಹಿಸಿ, ಬಡವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬುತ್ತಿರುವುದು good economics. ನಾನು good economics ನಲ್ಲಿ ನಂಬಿಕೆಯಿಟ್ಟಿರುವವನು. ಈ ಉದ್ದೇಶದಿಂದ ಮುಂದಿನ ವರ್ಷಕ್ಕೆ ಗ್ಯಾರಂಟಿಗಳಿಗೆ ರೂ.52,009 ಕೋಟಿ ಮೀಸಲಿಟ್ಟಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರಿಸಿದ್ದು, 15ನೇ ಹಣಕಾಸು ಆಯೋಗ ರಾಜ್ಯಕ್ಕೆ ಒಟ್ಟಾರೆ 11,495 ಕೋಟಿ ರೂ. ಶಿಫಾರಸ್ಸು ಮಾಡಿದ್ದನ್ನು ರಾಜ್ಯಕ್ಕೆ ಒತ್ತಾಯಿಸಿ ತನ್ನಿ ಎಂದು ಅಂದಿನ ಸರ್ಕಾರಕ್ಕೆ ತಿಳಿಸಿದ್ದೆ. ಕೇಂದ್ರದ ಬಜೆಟ್ 2023-24 ರಲ್ಲಿ ಭದ್ರಾ ಮೇಲ್ದಂಡೆಗೆ 5,300 ಕೋಟಿ ರೂ. ನೀಡಲಾಗುವುದು ಎಂದು ಹೇಳಿ ಅದಕ್ಕೆ ಯಾವುದೇ ಷರತ್ತುಗಳನ್ನು ಆಗ ಉಲ್ಲೇಖಿಸಿರಲಿಲ್ಲ. ಆ ಸಾಲಿನ ರಾಜ್ಯ ಬಜೆಟ್ ನಲ್ಲಿ ಮುಖ್ಯಮಂತ್ರಿಯಾಗಿದ್ದ Basavaraj Bommai ಯವರೂ ಉಲ್ಲೇಖಿಸಿದ್ದಾರೆ. ಆದರೆ ಈ ವರೆಗೂ ಒಂದು ರೂಪಾಯಿ ಬಂದಿಲ್ಲ. ಹೀಗಾಗಿ ಕೇಂದ್ರ Bharatiya Janata Party (BJP) ಸರ್ಕಾರದಿಂದ ರೂ.5,300 ಕೋಟಿ ಸಹಾಯಧನವನ್ನು ಬೊಮ್ಮಾಯಿಯವರು ಕೊಡಿಸಲಿ ಎಂದರು.
ನರೇಂದ್ರ ಮೋದಿ ಅವರು ಮುಖ್ಯಮಂತ್ರಿಯಾಗಿದ್ದಾಗ ಶೇ.50 ರಷ್ಟು ತೆರಿಗೆ ಪಾಲು ರಾಜ್ಯಕ್ಕೆ ವಾಪಾಸ್ ಕೊಡಿ ಎಂದು ಕೇಂದ್ರಕ್ಕೆ ಕೇಳಿದ್ದರು. ಈಗ ನಾವು ಕಟ್ಟುವ ಪ್ರತಿ ನೂರು ರೂಗೆ 12-13 ರೂ ಮಾತ್ರ ವಾಪಾಸ್ ಬರುತ್ತಿದೆ. ಈ ಅನ್ಯಾಯಗಳ ಬಗ್ಗೆ ಸಂಸದರು ಬಾಯಿಯನ್ನೇ ಬಿಡುವುದಿಲ್ಲ. ಘಡ ಘಡ ನಡುಗುತ್ತಾರೆ ಎಂದು ಹೇಳಿದರು.
ಇಂತಹ ಕೇಂದ್ರ ಸರ್ಕಾರವಿದ್ದರೆ ರಾಜ್ಯಗಳು ಪಂಗನಾಮ ಹಾಕಿಕೊಳ್ಳಬೇಕಷ್ಟೇ. ಮೊದಲು 50% ರಾಜ್ಯದ ಪಾಲು ನೀಡಲಿಲ್ಲ ಎನ್ನುತ್ತಿದ್ದ ವಿರೋಧಪಕ್ಷದವರು, ಈಗ ಸರಿಯಾದ ನಮೂನೆ ಸಲ್ಲಿಸಿಲ್ಲ ಎಂದು ನೆಪ ಹೇಳುತ್ತಿದ್ದಾರೆ. ಇದು ಭಂಡತನದ ವಾದ ಎಂದರು.
ಬಜೆಟ್ ನಲ್ಲಿ ಘೋಷಿಸದ ಅನುದಾನ ಕೇಳಿದರೆ ಸಂಘರ್ಷ ಎನ್ನುತ್ತಾರೆ. ರಾಜ್ಯದ ಜನರ ಪರವಾಗಿ, ರಾಜ್ಯಕ್ಕೆ ನ್ಯಾಯ ಕೋರುವುದು ನಮ್ಮ ಧರ್ಮ. ಇಲ್ಲದಿದ್ದರೆ ಜನರಿಗೆ ದ್ರೋಹ ಬಗೆದಂತೆ. ಮಧ್ಯಂತರ ವರದಿಯಲ್ಲಿ 5,495 ಕೋಟಿ ಉಲ್ಲೇಖಿಸಲಾಗಿದ್ದು, ಅಂತಿಮ ವರದಿಯಲ್ಲಿ ಇದು ಇಲ್ಲವಾಗಿರುವುದಕ್ಕೆ ಹಣ ನೀಡಿಲ್ಲ ಎಂಬ ವಿವೇಚನೆಯಿಲ್ಲದ ಉತ್ತರವನ್ನು ವಿರೋಧಪಕ್ಷದವರು ನೀಡುತ್ತಿದ್ದಾರೆ. ಇದನ್ನು double standards ಎನ್ನಬೇಕಾಗುತ್ತದೆ ಎಂದು ಹೇಳಿದರು.
ಫೆರಿಫೆರಲ್ ರಿಂಗ್ ರೋಡ್ ಹಾಗೂ ಬೆಂಗಳೂರಿನ ಕೆರೆಗಳ ಅಭಿವೃದ್ಧಿಗೆ ಘೋಷಿಸಿದ್ದ 6,000 ಕೋಟಿ ರೂ.ಗಳನ್ನೂ ನೀಡಿಲ್ಲ. ಕೇಂದ್ರದಲ್ಲಿ ಮೋದಿ ಪ್ರಧಾನಿಯಾದ ಮೇಲೆ ಕಾರ್ಪೊರೇಟ್ ತೆರಿಗೆಯನ್ನು 30% ರಿಂದ 22% ಕ್ಕೆ ಇಳಿಸಿದರು. ಆದರೆ ಜನಸಾಮಾನ್ಯರು ಕಟ್ಟುವ ತೆರಿಗೆಯ ಪಾಲು ಏರಿಕೆಯಾಗಿದೆ. ಗ್ಯಾಸ್, ಪೆಟ್ರೋಲ್, ಡೀಸೆಲ್, ರಸಗೊಬ್ಬರ ದರ ಏರಿಕೆಯಾಗಿದೆ. ಜತೆಗೆ ತೆರಿಗೆಯೂ ಹೆಚ್ಚಾಗಿದೆ.
ಬಡವರು, ದಲಿತರು, ಅಲ್ಪಸಂಖ್ಯಾತರು ಹೀಗೆ ಧರ್ಮ ಜಾತಿ ಬೇಧವಿಲ್ಲದೇ ನಮ್ಮ ಗ್ಯಾರಂಟಿಗಳು ಜನ ಸಾಮಾನ್ಯರು ಮತ್ತು ಫಲಾನುಭವಿಗಳಿಗೆ ತಲುಪಿವೆ. ಅವರಿಗೆ ಆರ್ಥಿಕ – ಸಾಮಾಜಿಕ ಬಲವನ್ನು ತುಂಬಲಾಗಿದೆ. ಎಸ್ ಸಿ ಪಿ-ಟಿಎಸ್ ಪಿ ಕಾನೂನು ತಂದಿದ್ದು ನಾವು. ಈ ಬಾರಿ ಎಸ್.ಸಿ/ಎಸ್.ಟಿ ಗೆ ರೂ.39 ಸಾವಿರ ಕೋಟಿ ನೀಡಿದ್ದೇವೆ. ಎಸ್.ಸಿ.ಪಿ – ಟಿ.ಎಸ್.ಪಿ ಕಾನೂನನ್ನು ಕೇಂದ್ರದವರು ರಾಷ್ಟ್ರ ಮಟ್ಟದಲ್ಲಿ ಜಾರಿ ಮಾಡಲಿ ನೋಡೋಣ ಎಂದು ಸವಾಲು ಹಾಕಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಮುಂಬಡ್ತಿಯಲ್ಲಿ ಮೀಸಲಾತಿ ತಂದಿದ್ದು ನಾವು. ಗುತ್ತಿಗೆದಾರರಿಗೆ ಮೀಸಲಾತಿ ಕಾನೂನು ತಂದಿದ್ದು ನಾವು. BJP Karnataka ನಾಯಕರ “ಸಬ್ ಕ ಸಾಥ್ , ಸಬ್ ಕ ವಿಕಾಸ್” ಕೇವಲ ಭಾಷಣಕ್ಕೆ ಮಾತ್ರ ಸೀಮಿತವಾಗದೆ ಅದರಂತೆ ನಡೆದುಕೊಳ್ಳಲಿ.
ಆದ್ದರಿಂದ ನಾವು ಸಂವಿಧಾನ ಜಾಗೃತಿ ಜಾಥಾ ಹಮ್ಮಿಕೊಂಡಿದ್ದೇವೆ. ನಾವು ಮನುವಾದದಲ್ಲಿ ನಂಬಿಕೆ ಇಟ್ಟಿಲ್ಲ, ಸಂವಿಧಾನದಲ್ಲಿ ನಂಬಿಕೆಯಿಟ್ಟಿರುವವರು. ಸರ್ವಜನಾಂಗದ ಶಾಂತಿಯ ತೋಟ ಎಂಬ ಮಾತಲ್ಲಿ ನಾವು ನಂಬಿಕೆಯಿರಿಸಿದ್ದೇವೆ. ಅದ್ದರಿಂದ ಎಲ್ಲ ವರ್ಗಗಳಿಗೆ ಶಕ್ತಿ ನೀಡಲು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದು ಹೇಳಿದರು.